ಜ. 4: ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕುಂಭ ಕಲಾವಳಿ ಕಾರ್ಯಕ್ರಮ
Thumbnail

ಮಂಗಳೂರು : ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ  ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ(ರಿ.) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ  ಹಾಗೂ ದಾಸ್  ಚಾರಿಟೇಬಲ್  ಸೇವಾ ಟ್ರಸ್ಟ್ (ರಿ.)ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪದಗ್ರಹಣ, ಸಭಾ ಕಾರ್ಯಕ್ರಮ, ಸಾಂಸ್ಕೃತಿಕ, ಕಾರ್ಯಕ್ರಮ, ಸಾಧಕರಿಗೆ ಸನ್ಮಾನ,  ಆಸಕ್ತರಿಗೆ ನೆರವು ಕಾರ್ಯಕ್ರಮ ಜನವರಿ 4 ರಂದು ನಡೆಯಲ್ಲಿದೆ.

 

ಉಡುಪಿ ಹಾಗೂ ದಕ್ಷಿಣ ಜಿಲ್ಲಾ ಕುಲಾಲ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಅಭೂತಪೂರ್ವ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿ ಎಂದು ದಕ್ಸಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಲ| ಅನಿಲ್ ದಾಸ್. ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಒಕ್ಕೂಟ (ರಿ ) ಮಂಗಳೂರು ಪರವಾಗಿ ನಮ್ಮ ಕಾಪು ನ್ಯೂಸ್ ಗೆ ತಿಳಿಸಿದ್ದಾರೆ.

03 Jan 2026, 11:58 AM
Category: Kaup
Tags: