ಕಾಪು ‌: ಶ್ರೀ ರಾಮ ಅನುದಾನಿತ ಹಿ. ಪ್ರಾ. ಶಾಲೆ, ಮಜೂರು - ಕರಂದಾಡಿ - ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ
Thumbnail

ಕಾಪು : ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಮಜೂರು - ಕರಂದಾಡಿ ಇದರ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ನೆರವೇರಿತು. 

ಕಾರ್ಯಕ್ರಮವನ್ನು  ಉದ್ಯಮಿ ಸಂತೋಷ್ ಶೆಟ್ಟಿ ಪಡುಬಿದ್ರಿ ಉದ್ಘಾಟಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಜೂರು ಮಲ್ಲಾರು ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳಾದ ಅಬ್ದುರ್ ರಶೀದ್ ಸಖಾಫಿ,ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ ಕಾಪು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಮಾಜಿ ಜಿಲ್ಲಾಧ್ಯಕ್ಷ  ಪದ್ಮಪ್ರಸಾದ್ ಜೈನ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದಿನ್ ಶೇಖ್ ಕರಂದಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕರಂದಾಡಿ  ಪದ್ಮನಾಭ ಶಾನುಭಾಗ್, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಪಿ ರವಿರಾಜ್ ಶೆಟ್ಟಿ ಪಂಜಿತ್ತೂರುಗುತ್ತು, ಶಾಲಾ ಮುಖ್ಯ ಶಿಕ್ಷಕ ಆರ್ ಎಸ್ ಕಲ್ಲೂರ, ಹಳೇ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಅಬ್ದುಲ್ ಕರೀಂ, ಕೋಶಾಧಿಕಾರಿ ನಾಗಭೂಷಣ್ ರಾವ್ ಉಪಸ್ಥಿತರಿದ್ದರು. 

ಈ ಸಂದರ್ಭ ಸಂತೋಷ್ ಶೆಟ್ಟಿ ಪಡುಬಿದ್ರಿ ಇವರನ್ನು ಸನ್ಮಾನಿಸಲಾಯಿತು.
 
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ ವಾಸುದೇವ ರಾವ್  ಸ್ವಾಗತಿಸಿದರು. 
ಪ್ರಧಾನ ಕಾರ್ಯದರ್ಶಿ ಎಮ್ ಕೆ ಇಬ್ರಾಹಿಂ ವಂದಿಸಿದರು. ನಿವೃತ್ತ ಮುಖ್ಯ ಶಿಕ್ಷಕ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Additional image
14 Jan 2026, 06:54 AM
Category: Kaup
Tags: