ಕಾಪು : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳಿ ಹಾಗೂ ತಾಯಿ ಗಿರಿಜಾ ಹಟ್ಟಿಹೋಳಿ ಮತ್ತು ಕುಟುಂಬಸ್ಥರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.
ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯಿಂದ ಅವರನ್ನು ಗೌರವಿಸಲಾಯಿತು.
ದೇವಸ್ಥಾನದ ಎದುರಿನ ಎನ್.ಎಚ್ 66 ಹೆದ್ದಾರಿಯ ಡೈವರ್ಶನ್ ಅಂಡರ್ ಪಾಸ್ ಬಳಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮನವಿ ನೀಡಲಾಯಿತು. ಇಲಾಖೆಯಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಮಾಧವ ಆರ್. ಪಾಲನ್, ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಪ್ರಮುಖರಾದ ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
