ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ಕೆ ಪ್ರಕಾಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಹಾಗೂ ಭಕ್ತರ ಸಭೆಯಲ್ಲಿ 2026ರ ಏ.23 ರಿಂದ ಮೊದಲ್ಗೊಂಡು ಮೇ 3 ರ ಪರ್ಯಂತ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪುನಃ ಪ್ರತಿಷ್ಣೆ ಹಾಗೂ ಬ್ರಹ್ಮಕಲಶಾಭಿಷೇಕ ನೆರವೇರಿಸುವುದೆಂದು ನಿಶ್ಚಯಿಸಲಾಗಿದೆ.
ಶ್ರೀ ಕ್ಷೇತ್ರದ ತಂತ್ರಿಗಳಾದ ಕಂಬಳಕಟ್ಟ ಶ್ರೀ ರಾಧಾಕೃಷ್ಣ ಉಪಾಧ್ಯಾಯರ ಮಾರ್ಗದರ್ಶನದಂತೆ ಏ. 29ರಂದು ಶ್ರೀಮಹಾಲಿಂಗೇಶ್ವರ ದೇವರ ಪುನ: ಪ್ರತಿಷ್ಠೆ ಮತ್ತು ಏ.30ಕ್ಕೆ ಶ್ರೀ ಮಹಾಗಣಪತಿ ದೇವರ ಪುನ: ಪ್ರತಿಷ್ಠೆ ಹಾಗೂ ಮೇ 2 ರಂದು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶಾಭಿಷೇಕ, ಮೇ. 3 ರಂದು ಶ್ರೀ ಮಹಾಗಣಪತಿ ದೇವರಿಗೆ ಬ್ರಹ್ಮಕಲಶಾಭಿಷೇಕ. ಮೇ 4ರಂದು ಸಂಪ್ರೋಕ್ಷಣೆ ಹಾಗೂ ಮಂತ್ರಾಕ್ಷತೆ ನಡೆಯಲಿದೆ.
ಶ್ರೀದೇವಳದ ಅನುವಂಶಿಕ ಮೊಕ್ತೇಸರರಾದ ರತ್ನಾಕರ ರಾಜ್ ಕಿನ್ಯಕ್ಕ ಬಳ್ಳಾಲ್, ಪೇಟೆ ಮನೆ ಭವಾನಿ ಶಂಕರ ಹೆಗ್ಡೆ ಮತ್ತು ಕೊರ್ನಾಯ ಶ್ರೀಪತಿ ರಾವ್ ಉಪಸ್ಥಿತರಿದ್ದರು.
