ಕಾಪು ಶ್ರೀ ಹೊಸ ಮಾರಿಗುಡಿಗೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ
Thumbnail

ಕಾಪು :  ಶ್ರೀ ಹೊಸ ಮಾರಿಗುಡಿ ದೇವಳದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ಸಾನಿಧ್ಯದಲ್ಲಿ ಫೆ. 28ರಿಂದ ಮಾ. 2ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ - ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಗುರುವಾರ ಸಂಜೆ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವದಿಂದ ಜರಗಿತು.

ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಹೊರೆ ಕಾಣಿಕೆ ಸಮರ್ಪಿಸಲಾಯಿತು.

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಯೋಗೀಶ್ ಶೆಟ್ಟಿ ಬಾಲಾಜಿ ಉಪಸ್ಥಿತರಿದ್ದರು.

Additional image Additional image Additional image Additional image Additional image
26 Feb 2026, 07:11 PM
Category: Kaup
Tags: