ಕಾಪು : ಶ್ರೀ ಹೊಸ ಮಾರಿಗುಡಿಯಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ: ಪ್ರತಿಷ್ಠೆಯ ಪ್ರಥಮ ವರ್ಧಂತಿ ಮಹೋತ್ಸವ ಅಂಗವಾಗಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ “ಮಾತೃ ವೈಭವ”ಭಕ್ತಿ ಭಾವಗಳ ಕಲರವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ಕೆ. ಪಿ. ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರ ಸಹಭಾಗಿತ್ವದಲ್ಲಿ ಅಭಿವೃದ್ಧಿ ಸಮಿತಿ ಮತ್ತು ಮಾತೃ ವೈಭವ ಸೇವಾ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮ ಪ್ರಾರಂಭಗೊಂಡಿತು.
ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತೆ ಮಂಜುಳಾ ಟಿ. ಎನ್., ಶ್ರುತಿ ಹರಿರಾಮ್ ಶಂಕರ್, ಬೀನಾ ವಾಸುದೇವ ಶೆಟ್ಟಿ, ರಂಜನಿ ಸುಧಾಕರ ಹೆಗ್ಡೆ ತುಂಗಾ, ಅನುರಾಧ ಮನೋಹರ್ ಶೆಟ್ಟಿ, ಮಮತಾ ಯೋಗೀಶ್ ಶೆಟ್ಟಿ, ವಿದ್ಯಾ ರವಿಕಿರಣ್, ಲಕ್ಷ್ಮೀ ಶ್ರೀನಿವಾಸ ತಂತ್ರಿ, ಸುಗುಣಾ ರತ್ನಾಕರ್ ಶೆಟ್ಟಿ ನಡಿಕೆರೆ ಸೇರಿದಂತೆ 81 ಮಂದಿ ಮಹಿಳೆಯರು ಮಾತೃ ವೈಭವ ದೀಪ ಪ್ರಜ್ವಲನೆಗೈದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶಾಸಕ ಸುರೇಶ್ ಬಾಬು ಚಿಕ್ಕನಾಯಕಹಳ್ಳಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಶ್ರೀ ಹೊಸ ಮಾರಿಗುಡಿಯ ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಮನೋಹರ ಎಸ್. ಶೆಟ್ಟಿ, ಗಂಗಾಧರ ಸುವರ್ಣ, ರಮೇಶ್ ಹೆಗ್ಡೆ ಕಲ್ಯ, ಉದಯ ಸುಂದರ್ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಭಗವಾನ್ ದಾಸ್ ಶೆಟ್ಟಿಗಾರ್, ಪ್ರಭಾಕರ ಎಸ್. ಪೂಜಾರಿ, ಹರಿಯಪ್ಪ ಕೋಟ್ಯಾನ್, ಲಕ್ಷ್ಮೀಶ ತಂತ್ರಿ ಮೊದಲಾದವರು ಉಪಸ್ಥಿತರಿದ್ದರು.
