ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ನಮ್ಮ ಕುಡ್ಲ ವಾಹಿನಿಯ ಉಡುಪಿ ಜಿಲ್ಲಾ ವರದಿಗಾರರಾದ ಪ್ರಮೋದ್ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘಕ್ಕೆ 2ನೇ ಬಾರಿ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.
ಕಳೆದ 4 ವರ್ಷದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಜೊತೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ
ಪ್ರಮೋದ್ ಸುವರ್ಣ ಕಟಪಾಡಿ
2025 ರಿಂದ 2028ರ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ
ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರಾಗಿ,
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಮಾಜಿ ಜೊತೆ ಕಾರ್ಯದರ್ಶಿಯಾಗಿ
ಮತ್ತೆ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಉಡುಪಿಯಲ್ಲಿ ನಡೆದ ನೂತನ ಪದಾಧಿಕಾರಿಗಳ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆ ಸರ್ಟಿಫಿಕೇಟ್ ನೀಡಿ ಗೌರವಿಸಿದರು.
ಈ ಸಂದರ್ಭ ರಾಜ್ಯ ಮತ್ತು ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಪ್ರಮುಖರು ಉಪಸ್ಥಿತರಿದ್ದರು.
