ಚಲನಚಿತ್ರ ನಟಿ ಶಾನ್ವಿ ಶ್ರೀವಸ್ತವ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ
Thumbnail

ಕಾಪು : ಕನ್ನಡ ಮತ್ತು ತೆಲುಗು ಚಿತ್ರರಂಗದ ನಟಿ ಶಾನ್ವಿ ಶ್ರೀವಸ್ತವ ಅವರು ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿಕೊಟ್ಟು ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು, ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ಅಮ್ಮನ ಸ್ವರ್ಣ ಗದ್ದುಗೆಯನ್ನು ಮತ್ತು ದೇವಳದ ಕೆತ್ತನೆಗಳನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರೀಕರಣ ಸಂದರ್ಭ ಇಲ್ಲಿಗೆ ಬರುವ ಅವಕಾಶ ಸಿಕ್ಕಿತು. ಇನ್ನೊಮ್ಮೆ ಬಿಡುವು ಮಾಡಿಕೊಂಡು ಬರುತ್ತೇನೆ ಎಂದು ಹೇಳಿದರು.

ಈ ಸಂದರ್ಭ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

12 Mar 2026, 07:08 PM
Category: Kaup
Tags: