ಸಂಸದ ಬಿ ವೈ ರಾಘವೇಂದ್ರ ಕುಟುಂಬ ಕಾಪು ಮಾರಿಯಮ್ಮ ಸನ್ನಿದಾನಕ್ಕೆ ಭೇಟಿ
ಕಾಪು : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ ಅವರು ಕುಟುಂಬ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.
ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ವ್ಯವಸ್ಥಾಪನಾ ಸಮಿತಿ ಅಭಿವೃದ್ಧಿ ಸಮಿತಿಯ ಸಮ್ಮುಖದಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ದೇವಳದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ, ಮತ್ತಿತರರು ಉಪಸ್ಥಿತರಿದ್ದರು.
