ಕಾಪು : ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣಗುರು ಸಭಾಂಗಣದ ಉದ್ಘಾಟನೆಯು ಎ.10 ರಿಂದ 12 ರ ವರಗೆ ನಡೆಯಲಿದೆ ಎಂದು ಕಾಪು ಬಿಲ್ಲವ ಸಂಘದ ಅಧ್ಯಕ್ಷ ವಿಕ್ರಂ ಕಾಪು ಹೇಳಿದರು.
ಅವರು ಕಾಪು ಪತ್ರಕರ್ತರ ಸಂಘದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎ.11ರಂದು ಬಿಲ್ಲವ ಭವನವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನಾರಾಯಣ ಗುರು ಸಭಾಂಗಣವನ್ನು ಹಿಂದುಳಿದ ವರ್ಗಗಳ ಮತ್ತು ಸಮಾಜ
ಕಲ್ಯಾಣ ಇಲಾಖಾ ಸಚಿವ ಶಿವರಾಜ್ ತಂಗಡಗಿ , ಭೋಜನ ಶಾಲೆಯನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಆಡಳಿತ ಕಛೇರಿಯನ್ನು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ದಿ.ಸಿಂಧು ಪೂವ ಪೂಜಾರಿ ವೇದಿಕೆಯನ್ನು ನಾಡೋಜ ಡಾ.ಜಿ. ಶಂಕರ್, ಮುಖ್ಯ ದ್ವಾರವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ.
ಎ.10ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಎ.11ರಂದು ಸಂಜೆ ಗಂಟೆ 6ರಿಂದ ಜರಗಲಿರುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠ, ಸೋಲೂರು ಪೀಠಾಧಿಫತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
ಮುಖ್ಯ ಅಥಿತಿಗಳಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್, ಗೋಪಾಲ ಪೂಜಾರಿ, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಪೂರ್, ನಾರಾಯಣ ಗುರು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಹೆಬ್ರಿ, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಮಹೇಶ್ ಅಂಚನ್, ಕಾಪು ಗ್ರಾಮ ದೇಗುಲದ ಅಧ್ಯಕ್ಷ ಮನೋಹರ ಶೆಟ್ಟಿ, ಕಾಪು ಹಳೆ ಮಾರಿಯಮ್ಮ ದೇವಳದ ಅಧ್ಯಕ್ಷ ಪ್ರಸಾದ್ ಶೆಣೈ, ಕಾಪು ಹೊಸ ಮಾರಿಯಮ್ಮ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾಪು ಸಿಎ ಬ್ಯಾಂಕ್ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಜನತಾದಳ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ಕಾಪು ಪುರಸಭಾ ಉಪಾಧ್ಯಕ್ಷೆ ಸರಿತಾ ಶಿವಾನಂದ, ಉದ್ಯಮಿ ಎಂ. ಉಮೇಶ್ ಶೆಟ್ಟಿ, ಬಿಲ್ಲವ ಮುವ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಎಂ. ಪೂಜಾರಿ, ಪುರಸಭೆಯ ಸದಸ್ಯೆ ಫರ್ಜಾನಾ, ಪುರಸಭೆ ಮುಖ್ಯಧಿಕಾರಿ ನೀಲಕಂಠ ಮೇಸ್ತ ಭಾಗವಹಿಸಲಿದ್ದಾರೆ. ದಾನಿಗಳಿಗೆ ಈ ಸಂದರ್ಭ ಸನ್ಮಾನದ ಗೌರವ ನಡೆಯಲಿದೆ.
11 ರ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶ್ರೀ ಕಾಪು ನಾರಾಯಣ ಗುರು ಸೇವಾ ಮಹಿಳಾ ಮಂಡಳಿ ಸದಸ್ಯೆಯರಿಂದ ಮನರಂಜನಾ ಕಾರ್ಯಕ್ರಮ ಹಾಗೂ ದೇಯಿ ಬೈದೆದಿ ನೃತ್ಯ ರೂಪಕ ನಡೆಯಲಿದ್ದು, ಬಳಿಕ ಮುಲ್ಕಿ ಶಿವ ಪ್ರಣಾಮ್ ತಂಡದಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ.
ಎ.12 ರಂದು ಸಂಜೆ ಗಂಟೆ 5ಕ್ಕೆ ಧಾರ್ಮಿಕ ಸಭೆ ಮತ್ತು ಸನ್ಮಾನ ಕಾರ್ಯಕ್ರಮವು ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಜರಗಲಿದೆ. ಬಳಿಕ ಶ್ರೀ ನಾರಾಯಣ ಗುರು ಸೇವಾ ಮಹಿಳಾ ಮಂಡಳಿ ಸದಸ್ಯರಿಂದ ನೃತ್ಯ ಕಾರ್ಯಕ್ರಮ ಮತ್ತು ತಾಂಬೂಲ ಕಲಾವಿದರು ಪುಂಜಾಲಕಟ್ಟೆ ಕುಡ್ಲ ಇವರಿಂದ ಎಲ್ಲೆ ದಾದ ಏರೆಗ್ ಗೊತ್ತು ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.
ಸುದ್ದಿ ಗೋಷ್ಠಿಯಲ್ಲಿ ಮಾಜಿ ಅಧ್ಯಕ್ಷ ಮಾಧವ ಪಾಲನ್, ಕಾರ್ಯದರ್ಶಿ ಅನಿಲ್ ಕಾಪು, ದಿನೇಶ್ ಸಾಲ್ಯಾನ್, ದೇವರಾಜ್ ಎ. ಕೋಟ್ಯಾನ್, ಶೇಖರ ಕೋಟ್ಯಾನ್ ಹಾಗೂ ಪ್ರವೀಣ್ ಪೂಜಾರಿ ಉಪಸ್ಥಿತರಿದ್ದರು.
