ಕಾಪು : ವಿವಿಧ ಇಲಾಖೆಗಳ ಆಶ್ರಯದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ಕಾಪು : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಕಾಪು ತಾಲೂಕು ಇವರ ಸಂಯುಕ್ತ ಆಶ್ರಯದೊಂದಿಗೆ ಮಂಗಳವಾರ ಕಾಪು ಪ್ರಜಾಸೌಧದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ರವರ 135ನೇ ಜನ್ಮ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ವಿಜಯಲಕ್ಷ್ಮಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
