ಪಡುಬಿದ್ರಿ: ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಗಳ ಜೊತೆಗೆ ಪರಿಸರದ ಬಗ್ಗೆ ವಿಶೇಷ ಕಾಳಜಿಯನ್ನು ಸಂಘಟನೆಗಳು ಹೊಂದುವ ಮೂಲಕ ಪರಿಸರ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು.
ಪಡುಬಿದ್ರಿಯ ಕರಾವಳಿ ಸ್ಟಾಸ್೯ ಸಂಘಟನೆಯ 16ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಂಘಟನೆಗಳು ಕೇವಲ ಸೇವಾ ಚಟುವಟಿಕೆಗಳಿಗೆ ಸೀಮಿತವಾಗದೇ, ಪರಿಸರ ಉಳಿವಿನತ್ತ ಗಮನ ಹರಿಸುವುದು ಅವಶ್ಯಕ. ಈ ನಿಟ್ಟಿನಲ್ಲಿ ಕರಾವಳಿ ಸ್ಟಾರ್ಸ್ ನಡಿಪಟ್ಣ ಸಂಘಟನೆ ಸಾಮಾಜಿಕ, ಶೈಕ್ಷಣಿಕ ಹಾಗೂ ಪರಿಸರ ಸಂರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ಮಾದರಿ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಪ್ರಶಂಸಿಸಿದರು.
ಗುರಿಕಾರರು ಮುರುಡಿ ಜಗದೀಶ್ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶುಭಹಾರೈಸಿದರು.
ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧಕರನ್ನು ಸನ್ಮಾನಿಸಲಾಯಿತು. ಇದೇ ವೇಳೆ ಬಿಗ್‌ಬಾಸ್ ರನ್ನರ್‌ಅಪ್ ರಕ್ಷಿತಾ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಕಾಂತ್, ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷ ಯತೀಶ್ ಬೈಕಂಪಾಡಿ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ.ಸುಕುಮಾರ್, ಉಡುಪಿ ಜಿಲ್ಲಾ ಮೀನುಗಾರ ಘಟಕದ ಅಧ್ಯಕ್ಷ ವಿಶ್ವಾಸ್ ಅಮೀನ್, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್‌ಚಂದ್ರ ಜೆ.ಶೆಟ್ಟಿ, ಖಾದಿ ಹಾಗೂ ಗ್ರಾಮೋಧ್ಯೋಗ ಮಂಡಳಿಯ ಮಾಜಿ ನಿರ್ದೇಶಕ ಮಿಥುನ್ ಆರ್. ಹೆಗ್ಡೆ, ಆದ್ಯ ಫೌಂಡೇಶನ್ ಸಂಸ್ಥಾಪಕ ರಾಕೇಶ್ ಅಜಿಲ, ಕಾಡಿಪಟ್ಣ ಮೊಗವೀರ ಸಭಾ ಅಧ್ಯಕ್ಷ ಅಶೋಕ್ ಸಾಲಿಯಾನ್, ಕಾಡಿಪಟ್ಣ ನಡಿಪಟ್ಣ ವಿದ್ಯಾಪ್ರಚಾರಕ ಸಂಘದ ಅಧ್ಯಕ್ಷ ಸುಕುಮಾರ್ ಶ್ರೀಯಾನ್, ನಡಿಪಟ್ಣ ಮೊಗವೀರ ಮಹಾಸಭಾ ಅಧ್ಯಕ್ಷ ಹರೀಶ್ ಪುತ್ರನ್, ಯಂಗ್ ಸ್ಟಾರ್ಸ್ ಯುವಕ ಮಂಡಲ ಬೈಕಂಪಾಡಿ ಅಧ್ಯಕ್ಷ ನವೀನ್ ಸಾಲಿಯಾನ್, ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ಅಧ್ಯಕ್ಷ ಶರತ್ ಶೆಟ್ಟಿ, ಮೊಗವೀರ ಮುಖಂಡರಾದ ಕೆ.ಎನ್.ಚಂದ್ರಶೇಖರ್, ಗಂಗಾಧರ್ ಕರ್ಕೇರ, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್, ಕರವೇ ಕಾಪು ತಾಲ್ಲೂಕು ಅಧ್ಯಕ್ಷ ಎಮ್.ಎಸ್ ಶಾಫಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್, ಕರಾವಳಿ ಸ್ಟಾರ್ಸ್ ಅಧ್ಯಕ್ಷ ಕಾರ್ತಿಕ್ ಅಮೀನ್, ಕಾರ್ಯದರ್ಶಿ ಆಶೀಕ್ ಅಮೀನ್ ಉಪಸ್ಥಿತರಿದ್ದರು.
ಸಂತೋಷ್ ಸಾಲ್ಯಾನ್ ಕಾರ್ಯಕ್ರಮ ನಿರ್ವಹಿಸಿದರು. ಕಿರಣ್ ರಾಜ್ ಕರ್ಕೇರ ಸ್ವಾಗತಿಸಿದರು. ದಿಶಾನ್ ಪುತ್ರನ್ ವಂದಿಸಿದರು.
