ಎ.25 : ಪಡುಬಿದ್ರಿ ಶ್ರೀ ವನದುರ್ಗಾ ಟ್ರಸ್ಟ್ ಬೇಂಗ್ರೆ ಶಿವಳ್ಳಿ ಬ್ರಾಹ್ಮಣ ಹತ್ತು ಸಮಸ್ತರ ಆಡಳಿತ ಮಂಡಳಿ ವತಿಯಿಂದ ಸ್ವರ್ಣ ಪಲ್ಲಕ್ಕಿ, ಬೆಳ್ಳಿ ಹೊದಿಕೆ ಸಮರ್ಪಣೆ
Thumbnail

ಪಡುಬಿದ್ರಿ : ಇಲ್ಲಿನ ಶ್ರೀ ವನದುರ್ಗಾ ಟ್ರಸ್ಟ್ (ರಿ.) ಬೇಂಗ್ರೆ ಶಿವಳ್ಳಿ ಬ್ರಾಹ್ಮಣ ಹತ್ತು ಸಮಸ್ತರ ಆಡಳಿತ ಮಂಡಳಿಯ ವತಿಯಿಂದ ಏಪ್ರಿಲ್ 25, ಶನಿವಾರ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ವೆಚ್ಚದಲ್ಲಿ ಸ್ವರ್ಣ ಪಲ್ಲಕ್ಕಿ ಹಾಗೂ ಶ್ರೀ ಮಹಾಗಣಪತಿ ದೇವರ ಗರ್ಭಗುಡಿಯ ಬಾಗಿಲಿಗೆ ಬೆಳ್ಳಿಯ ಹೊದಿಕೆ ಸಮರ್ಪಣೆಯ ಶೋಭಾ ಯಾತ್ರೆಯು ಸಂಜೆ 3:30 ನಡೆಯಲಿದೆ ಎಂದು ವನದುರ್ಗಾ ಟ್ರಸ್ಟ್ ಕಾರ್ಯದರ್ಶಿ ರಾಮಚಂದ್ರ ರಾವ್ ವೈ.ಯನ್ ಖಡ್ಗೇಶ್ವರಿ ಜ್ಞಾನ ಮಂದಿರದಲ್ಲಿ ಮಂಗಳವಾರ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬ್ರಹ್ಮಸ್ಥಾನಕ್ಕೂ ಪಡುಬಿದ್ರಿ ದೇವಳಕ್ಕೂ ನಿಕಟ ಸಂಬಂಧವಿದೆ. ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಸ್ವರ್ಣ ಪಲ್ಲಕ್ಕಿ ಹಾಗೂ ಶ್ರೀ ಮಹಾಗಣಪತಿ ದೇವರ ಗರ್ಭಗುಡಿಯ ಬಾಗಿಲಿಗೆ ಬೆಳ್ಳಿಯ ಹೊದಿಕೆ ಶೋಭಾಯಾತ್ರೆಗೆ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಚಾಲನೆ ದೊರೆಯಲಿದೆ. ಶೋಭಾಯಾತ್ರೆಯು ಭಜನಾ ತಂಡ, ಚೆಂಡೆ ವಾದನದೊಂದಿಗೆ ಬ್ರಹ್ಮಸ್ಥಾನ ಮಾರ್ಗವಾಗಿ ಪೇಟೆಯ ಮೂಲಕ ಪಡುಬಿದ್ರಿ ದೇವಳಕ್ಕೆ ಬರಲಿದೆ. 

ಜೊತೆಗೆ ಮೇ.2 ಬ್ರಹ್ಮಕಲಶೋತ್ಸವದ ದಿನದಂದು ಮಹಾ ಅನ್ನಸಂತರ್ಪಣೆ, ಹೂವಿನ ಅಲಂಕಾರ, 4 ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಾಯೋಜಕತ್ವದೊಂದಿಗೆ ಒಟ್ಟು 3 ಕೋಟಿಯ ಸೇವಾ ರೂಪದ ಕಾರ್ಯ ನೀಡಲಿದ್ದೇವೆ. 

ಶೋಭಾ ಯಾತ್ರೆಯ ಬಳಿಕ ಜರಗುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪಲಿಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಆಶೀರ್ವಚನ, ಪಡುಬಿದ್ರಿ ದೇವಳದ ತಂತ್ರಿಗಳಾದ ವೇ.ಮೂ.ಕಂಬ್ಳಕಟ್ಟ ರಾಧಾಕೃಷ್ಣ ಉಪಾಧ್ಯಾಯ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಜನಪದ ಸಂಶೋಧಕ ಕೆ.ಎಲ್.ಕುಂಡಂತಾಯ, ಪಡುಬಿದ್ರಿ ಮಠತ್ರಾಮಮನೆ ಗಂಗಾಧರ್ ರಾವ್, ಕಾರ್ಯನಿರ್ವಹಣಾಧಿಕಾರಿ ಕೆ.ರಾಜಗೋಪಾಲ ಉಪಾಧ್ಯಾಯ, ಕ್ಷೇತ್ರದ ಅರ್ಚಕರಾದ ಎಚ್.ಪದ್ಮನಾಭ ಭಟ್, ವೈ.ಗುರುರಾಜ ಭಟ್, ಅನುವಂಶಿಕ ಮೊಕ್ತೇಸರರುಗಳಾದ ರತ್ನಾಕರರಾಜ ಅರಸು ಕಿನ್ನಕ್ಕ ಬಲ್ಲಾಳ್, ಪೇಟೆಮನ ಭವಾನಿ ಶಂಕರ್ ಹೆಗ್ಡೆ, ಕೊರ್ನಾಯ ಶ್ರೀಪತಿ ರಾವ್ ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊರ್ನಾಯ ಪದ್ಮನಾಭ ರಾವ್ ವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶ್ರೀ ವನದುರ್ಗಾ ಟ್ರಸ್ಟ್ ನ ಕಾರ್ಯದರ್ಶಿ ರಾಮಚಂದ್ರ ರಾವ್ ವೈ.ಎನ್, 
ಒಂದನೇ ಗುರಿಕಾರ ಕೊರ್ನಾಯ ಪದ್ಮನಾಭ ರಾವ್, ಕೋಶಾಧಿಕಾರಿ ಸುರೇಶ್ ರಾವ್ ವೈ. ಎರಡನೇ ಗುರಿಕಾರ ನಟರಾಜ ಪಿ.ಎನ್, ಮೂರನೇ ಗುರಿಕಾರ ಮುರುಡಿ ಜಗದೀಶ್ ರಾವ್, ಟ್ರಸ್ಟ್ ಸದಸ್ಯರಾದ ಪಿ. ಶ್ರೀನಿವಾಸ್ ರಾವ್, ರವೀಂದ್ರ ಪಿ.ಎಚ್ ಉಪಸ್ಥಿತರಿದ್ದರು.

21 Apr 2026, 03:05 PM
Category: Kaup
Tags: