ಎ.24 : ತ್ರಿಶಾ ವಿದ್ಯಾ ಪಿ.ಯು ಕಾಲೇಜು ಕಟಪಾಡಿ - ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ
Thumbnail

ಕಾಪು : ತ್ರಿಶಾ ವಿದ್ಯಾ ಪಿ.ಯು ಕಾಲೇಜಿನ ವತಿಯಿಂದ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವ ಸಲುವಾಗಿ ಸನ್ಮಾನ ಸಮಾರಂಭವನ್ನು ಎ.24,  ಶುಕ್ರವಾರ ಸಂಜೆ 4 ಗಂಟೆಯಿಂದ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ  ಆಯೋಜಿಸಲಾಗಿದೆ ಎಂದು ತ್ರಿಶಾ ವಿದ್ಯಾ ಪಿ.ಯು ಕಾಲೇಜು ಕಟಪಾಡಿ ಇಲ್ಲಿನ ಪ್ರಾಂಶುಪಾಲರಾದ ಪ್ರೊ.ಹರಿಪ್ರಸಾದ್ ಬುಧವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕರಾವಳಿ ಕರ್ನಾಟಕದಲ್ಲಿ ವಾಣಿಜ್ಯ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ತ್ರಿಶಾ ಸಮೂಹ ಸಂಸ್ಥೆಗಳ ಅಂಗ ಸಂಸ್ಥೆಯಾದ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು ಆರಂಭವಾದ ನಾಲ್ಕು ವರ್ಷಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ 11 ರ್‍ಯಾಂಕ್ ಗಳನ್ನು ಪಡೆದುಕೊಂಡಿದೆ . ಪ್ರಸಕ್ತ ವರ್ಷ ವಿಜ್ಞಾನ ವಿಭಾಗದಲ್ಲಿ 1  ಮತ್ತು ವಾಣಿಜ್ಯ ವಿಭಾಗದಲ್ಲಿ 8 ರ‍್ಯಾಂಕುಗಳನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತದೆ.
ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವಿಭಾಗಗಳಲ್ಲೂ ಸಾಧನೆಗಳನ್ನು ಮಾಡುತ್ತಿದ್ದಾರೆ. ಇಲ್ಲಿಯ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದಲ್ಲೂ ಕೂಡ ತಮ್ಮ ಛಾಪನ್ನು ಮೂಡಿಸುತ್ತಿದ್ದಾರೆ.

ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿಎ ಗೋಪಾಲ ಕೃಷ್ಣ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಗೌರವ ಅತಿಥಿಗಳಾಗಿ ಎಸ್‌ವಿಎಸ್ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ. ಸತ್ಯೇಂದ್ರ ಪೈ, ಸಿದ್ಧಾಂತ್ ಫೌಂಡೇಶನ್ ಟ್ರಸ್ಟಿ 
ನಮಿತಾ ಜಿ ಭಟ್ ಭಾಗವಹಿಸಲಿದ್ದಾರೆ.

ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಹರಿಪ್ರಸಾದ್ ಹಾಗೂ ತ್ರಿಶಾ ಪಿಯು ಕಾಲೇಜು ಕೊಟ್ಟಾರ, ಮಂಗಳೂರಿನ ಪ್ರಾಂಶುಪಾಲರಾದ ಯಶಸ್ವಿನಿ ಯಶಪಾಲ್, ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ
ಉಪಸ್ಥಿತರಿರಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತ್ರಿಶಾ ವಿದ್ಯಾ ಕಾಲೇಜು ಕಟಪಾಡಿ ಪ್ರಾಂಶುಪಾಲರಾದ ಪ್ರೊ. ವಿಘ್ನೇಶ್ ಶೆಣೈ, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು ಕಟಪಾಡಿಯ ಡಾ. ಕುಲದೀಪ್ ವೈ, ಕನ್ನಡ ಪ್ರಾಧ್ಯಾಪಕ ಧೀರಜ್‌ ಬೆಳ್ಳಾರೆ ಉಪಸ್ಥಿತರಿದ್ದರು.

22 Apr 2026, 06:18 PM
Category: Kaup
Tags: