ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕಸಾಪ ಘಟಕದ ಸಹಭಾಗಿತ್ವದಲ್ಲಿ ಮೇ.5, ಮಂಗಳವಾರ ಅಪರಾಹ್ನ ಗಂಟೆ 3ಕ್ಕೆ ಕಾಪು ಸಾರ್ವಜನಿಕ ಗ್ರಂಥಾಲಯದಲ್ಲಿ ಕಸಾಪ 112ನೇ ಸಂಸ್ಥಾಪನಾ ದಿನಾಚರಣ ಕಾರ್ಯಕ್ರಮ ಜರುಗಲಿದೆ.
ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸುವರು.
ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡುವರು. ಕಾಪು ಪುರಸಭಾ ಮುಖ್ಯ ಅಧಿಕಾರಿ ನೀಲಕಂಠ ಮೇಸ್ತ ದಿಕ್ಸೂಚಿ ಭಾಷಣ ಮಾಡುವರು.
ಮುಖ್ಯ ಅತಿಥಿಗಳಾಗಿ ಕಾಪು ತಾಲೂಕು ತಹಶೀಲ್ದಾರ್ ಅನಂತ ಶಂಕರ ಬಿ, ಕಾಪು ಪುರಸಭಾ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಉಪಾಧ್ಯಕ್ಷೆ ಸರಿತಾ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಪಡುಬಿದ್ರಿ, ಉಡುಪಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕಸಾಪ ಜಿಲ್ಲಾ ಪ್ರತಿನಿಧಿ ಕಟ್ಟಿಂಗೆರಿ ದೇವದಾಸ್ ಹೆಬ್ಬಾರ್ ಭಾಗವಹಿಸುವರು.
ಈ ಸಂದರ್ಭದಲ್ಲಿ ಕಾಪು ಪುರಸಭಾ ವ್ಯಾಪ್ತಿಯ ಗ್ರಂಥಾಲಯ ಮೇಲ್ವಿಚಾರಕರಾದ ಪೂರ್ಣಿಮಾ ಕಾಪು, ಆಶಾ ಉಳಿಯಾರಗೋಳಿ, ನಸ್ರಿನ್ ಫಾತಿಮಾ ಮಲ್ಲಾರು ಇವರನ್ನು ಸನ್ಮಾನಿಸಲಾಗುವುದು ಮತ್ತು ಗ್ರಂಥಾಲಯಗಳಿಗೆ ಕಾಪು ಸಾಹಿತ್ಯ ಪರಿಷತ್ತು ವತಿಯಿಂದ ಪುಸ್ತಕಗಳನ್ನು ಹಸ್ತಾಂತರಿಸಲಾಗುವುದು ಎಂದು ಕಸಾಪ ಕಾಪು ತಾಲೂಕು ಘಟಕದ ಪ್ರಕಟನೆ ತಿಳಿಸಿದೆ.
