ಪಡುಬಿದ್ರಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಅಶೋಕ್ ಸಾಲ್ಯಾನ್, ಸಂತೋಷ್ ಪಡುಬಿದ್ರಿಯವರಿಗೆ ಸನ್ಮಾನ
Thumbnail

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ    ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾವು ದೇವಸ್ಥಾನದ ಜೀರ್ಣೋದ್ಧಾರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಗಾಗಿ ಸಂಸ್ಥೆಯ ಅಧ್ಯಕ್ಷರಾದ ಅಶೋಕ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿ   ಸಂತೋಷ್ ಪಡುಬಿದ್ರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ದೇವಳದ ಜೀಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ.ಕೆ.ಪ್ರಕಾಶ್ ಶೆಟ್ಟಿ ಸಹಿತ ಗಣ್ಯರು ಉಪಸ್ಥಿತರಿದ್ದರು.

 

14 May 2026, 10:07 AM
Category: Kaup
Tags: