ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಈದುಲ್ ಅಲ್ಹ ಹಬ್ಬ ಆಚರಣೆ
Thumbnail

ಕಾಪು : ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಈದುಲ್ ಅಲ್ಹ ಹಬ್ಬದ ಪ್ರಾರ್ಥನೆ ಹಾಗೂ ನಮಾಜ್ ಮಸ್ಜಿದ್ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಬದ್ರಿಯ ಜುಮ್ಮಾ ಮಸ್ಜಿದ್ ಅಧ್ಯಕ್ಷರಾದ ಡಾ.ಫಾರೂಕ್ ಚಂದ್ರನಗರ ಈದ್ ಶುಭಾಶಯದ ಮಾತುಗಳನ್ನಾಡಿದರು.

ಮಸ್ಜಿದ್ ಉಪಾಧ್ಯಕ್ಷರಾದ ಹಸನಬ್ಬ ಮಜೂರು ಪ್ರ.ಕಾರ್ಯದರ್ಶಿ ಅಶ್ರಫ್ ಮೂಸ, ಕಾರ್ಯದರ್ಶಿಗಳಾದ ಅಶ್ರಫ್ ಕರಂದಾಡಿ, ರಜಬ್ ಕರಂದಾಡಿ, ಕೋಶಾಧಿಕಾರಿ ಪಿ.ಎಂ ಇಬ್ರಾಹಿಂ ಜಮಾತ್ ಕಮಿಟಿ ಸದಸ್ಯರು ಹಾಗೂ ಜಮಾತ್ ಬಾಂದವರು ಇನ್ನಿತರರು ಉಪಸ್ಥಿತರಿದ್ದರು.

28 May 2026, 10:01 AM
Category: Kaup
Tags: