ಕಾಪು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು.
ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ತಂತ್ರಿ ಜ್ಯೋತಿಷ್ಯ ವಿದ್ವಾನ್ ಕುಮಾರಗುರು ತಂತ್ರಿ ಕೊರಂಗ್ರಪಾಡಿ, ಪ್ರಧಾನ ಅರ್ಚಕ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯ ಅವರು ದೇವರಲ್ಲಿ ಪ್ರಾರ್ಥಿಸಿ, ಪ್ರಸಾದ ನೀಡಿದರು. ರಕ್ಷಾ ರೂಪದಲ್ಲಿ ದೇವಿಯ ಸೀರೆಯನ್ನು ಪ್ರಸಾದವಾಗಿ ನೀಡಲಾಯಿತು.
ಈ ಸಂದರ್ಭ ಸಚಿವೆ ನಿರ್ಮಲಾ ಸೀತಾರಾಮನ್ ಭಾವುಕರಾದರು.
ಕಾಪು ಶಾಸಕ ಮತ್ತು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಮಾಜಿ ಆಡಳಿತ ಮೊಕ್ತೇಸರ ರಮೇಶ್ ಹೆಗ್ಡೆ ಕಲ್ಯ, ಮೊಕ್ತೇಸರರಾದ ಶೇಖರ ಸಾಲ್ಯಾನ್, ರವೀಂದ್ರ ಮಲ್ಲಾರು, ಜಯಲಕ್ಷ್ಮೀ ಎಸ್. ಶೆಟ್ಟಿ, ಚರಿತಾ ದೇವಾಡಿಗ, ಬಿಜೆಪಿ ಮುಖಂಡರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ಜೆಡಿಎಸ್ ಮುಖಂಡ ಜಯರಾಮ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.
