ಶ್ರೀ ದೇವಿ ಫ್ರೆಂಡ್ಸ್ ಮಲ್ಲಾರು ರಾಣ್ಯಕೇರಿ, ಕಾಪು : 4 ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ
Thumbnail

ಕಾಪು : ಶ್ರೀ ದೇವಿ ಫ್ರೆಂಡ್ಸ್ ಮಲ್ಲಾರು ರಾಣ್ಯಕೇರಿ, ಕಾಪು ಇವರ ನೇತೃತ್ವದಲ್ಲಿ ದಿ.ಕಾಪು ಲೀಲಾಧರ್ ಶೆಟ್ಟಿ ಇವರ ಸ್ಮರಣಾರ್ಥ ರಾಣೆಯಾರ್ ಸಮಾಜದ ವಿದ್ಯಾರ್ಥಿಗಳಿಗೆ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕೋಟೆ ಶ್ರೀ ಹಳೇ ಮಾರಿಯಮ್ಮ ಸಭಾಂಗಣದಲ್ಲಿ ಜರಗಿತು.

ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಕೋಟೆ ಶ್ರೀ ಹಳೇ ಮಾರಿಗುಡಿಯ ಗುರಿಕಾರರಾದ ಜಯ ರಾಣ್ಯ, ಶ್ರೀ ದೇವಿ ಫ್ರೆಂಡ್ಸ್ ಅಧ್ಯಕ್ಷರಾದ ರಕ್ಷತ್, ಕಾಪು ಶ್ರೀ ಹೊಸ ಮಾರಿಗುಡಿಯ ಸದಸ್ಯರಾದ ರವೀಂದ್ರ ಮಲ್ಲಾರ್, ಹರಿ ರಾಣ್ಯ, ರಾಣೆಯಾರ್ ಸಮಾಜ ಸೇವಾ ಸಂಘ ಕಾಪು ವಲಯದ ಅಧ್ಯಕ್ಷರಾದ ನಾಗಾರ್ಜುನ ಕಾಪು, ಶಿರ್ವ ಅಮೃತ ಕ್ಯಾಂಟೀನ್ ಇದರ ಜಗದೀಶ್, ಕೋಟೆ ಶ್ರೀ ಹಳೇ ಮಾರಿಗುಡಿ ಮಹಿಳಾ ‌ಮಂಡಳಿಯ ಅಧ್ಯಕ್ಷರಾದ ಕು.ಜ್ಞಾನೇಶ್ವರಿ ಉಪಸ್ಥಿತರಿದ್ದರು.

Additional image Additional image
15 Jun 2026, 08:48 AM
Category: Kaup
Tags: