ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರದಲ್ಲಿ ಉಸಿರಿಗಾಗಿ ಹಸಿರು ಅಭಿಯಾನಕ್ಕೆ ಚಾಲನೆ
Thumbnail


ಕಾಪು : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ  ನಡೆಯಿತು.
 
 ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರ ಪುರ ಏಕ ಜಾತಿ ಧರ್ಮ ಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ, ಇಂದು ಪ್ರಕೃತಿ ಹಲವಾರು ವೈರುಧ್ಯಗಳಿಂದ ಕೂಡಿದೆ ಮಳೆಗಾಲದಲ್ಲಿ ಸರಿಯಾಗಿ ಮಳೆ ಬರುತ್ತಿಲ್ಲ ಇದಕ್ಕೆಲ್ಲ ಕಾರಣ ಪ್ರಕೃತಿಯ ನಾಶ ಈ ನಿಟ್ಟಿನಲ್ಲಿ ಉಸಿರಿಗಾಗಿ ಹಸಿರು ಅಭಿಯಾನ ಕ್ಷೇತ್ರದ ವತಿಯಿಂದ ಪ್ರಾರಂಭಿಸಲಾಗಿದೆ.

 ಪ್ರತಿಯೊಬ್ಬರು ವರ್ಷಕ್ಕೆ ಕನಿಷ್ಠ ಒಂದು ಗಿಡವನ್ನಾದರು ನೆಟ್ಟು ಬೆಳೆಸುವ ಕಾರ್ಯ ನಡೆಯಬೇಕಾಗಿದೆ ಎಂದರು. ಮುಂದಿನ ದಿನಗಳಲ್ಲಿ ಈ ಅಭಿಯಾನ ರಾಜ್ಯವಾಪಿ ನಡೆಯಲಿದೆ ಎಂದರು.

 ಮುಖ್ಯ ಅತಿಥಿ ಸಮಾಜಕಾರ್ಯ ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ ನಾಯಕ್, ಗಿಡಗಳನ್ನು ವಿತರಿಸಿ ಮಾತನಾಡಿ, ಪ್ರಕೃತಿಯನ್ನು ಉಳಿಸಿದರೆ ಮಾತ್ರ ಜೀವಸಂಕುಲ ಉಳಿಯಬಹುದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಿಡ ನೆಟ್ಟು ಬೆಳೆಸುವ ಕಾರ್ಯ ಮಾಡಬೇಕು ಶ್ರೀ ಕ್ಷೇತ್ರದ ವತಿಯಿಂದ  ನಡೆಯುವ ಈ ಯೋಜನೆ ಅಪೂರ್ವವಾಗಿದೆ ಎಂದರು.

 ವೇದಿಕೆಯಲ್ಲಿ ಮಂದಿರದ ಟ್ರಸ್ಟಿ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ರಾಮಪ್ಪ ಪೂಜಾರಿ ಸಂತೆಕಟ್ಟೆ  ಮುಂತಾದವರು ಉಪಸ್ಥಿತರಿದ್ದರು.

 ಈ ಸಂದರ್ಭದಲ್ಲಿ ಭಕ್ತರಿಗೆ ವಿವಿಧ ಗಿಡಗಳನ್ನು ವಿತರಿಸಲಾಯಿತು. 

ಕಾರ್ಯಕ್ರಮದ ಸಂಯೋಜಕ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ವಂದಿಸಿದರು.

26 Jun 2026, 07:09 AM
Category: Kaup
Tags: