ಪಡುಬಿದ್ರಿ : ಹೆಜಮಾಡಿಯ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಇಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮವನ್ನು ಮೂಲ್ಕಿಯ ಸುರಭಿ ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ಸ್ ಮಾಲೀಕರಾದ ಜೋನ್ ಕ್ವಾಡ್ರಸ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಸರಕಾರಿ ಶಾಲೆ ಹಾಗೂ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಧನ ಸಹಾಯವನ್ನು ಮಾಡುವುದಾಗಿ ಹೇಳಿದರು. ಈ ಸಂದರ್ಭ ಶಾಲೆಗೆ 20 ಕುರ್ಚಿಗಳನ್ನು ಕೊಡುಗೆಯಾಗಿ ನೀಡುವುದಾಗಿ ತಿಳಿಸಿದರು.
ವಕೀಲರಾದ ರವೀಶ್ ಕಾಮತ್ ಇವರು ಶಾಲಾ ಸಂಸತ್ತಿನ ರಚನೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ತಿಳಿಸಿದರು.
ಶಾಲೆಯ ನೂತನ ಸಭಾಂಗಣಕ್ಕೆ ಮುಂಬೈ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶೇಷಗಿರಿ ರಾವ್ ಅವರು ನೀಡಲ್ಪಟ್ಟ 25 ಕುರ್ಚಿಗಳನ್ನು ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಜಮಾಡಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಮೋಹನ ಸುವರ್ಣ, ಮಾಜಿ ಗ್ರಾ.ಪಂ.ಸದಸ್ಯ ಪಾಂಡುರಂಗ ಕರ್ಕೇರ, ಪ್ರೌ.ಶಾ. ಅ. ಸಮಿತಿ ಅಧ್ಯಕ್ಷರಾದ ಶೈಲಜಾ, ಸದಸ್ಯರು ,ಶಿಕ್ಷಕಿಯರಾದ ದೀಪ ಉಡುಪ, ವನಿತಾ ಅಲ್ಮೇಡ, ಸರೋಜಾ ಆಚಾರಿ, ಅನಿತಾ, ಸುಚೇತಾ, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕಿ ಸಂಪಾವತಿ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ದೈ.ಶಿ.ಶಿಕ್ಷಕ ಮಂಜುನಾಥ ವಂದಿಸಿದರು. ಸಹ ಶಿಕ್ಷಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
