ಇನ್ನಂಜೆ : ಎಸ್ ವಿ ಹೆಚ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಮಾರ್ಟ್ ಬೋರ್ಡ್ ಉದ್ಘಾಟನೆ
Thumbnail

ಕಾಪು : ಇನ್ನಂಜೆಯ ಎಸ್ ವಿ ಹೆಚ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ಮಾರ್ಟ್ ಬೋರ್ಡ್ ಉದ್ಘಾಟನಾ ಕಾರ್ಯಕ್ರಮ ಜರಗಿತು.

ಎಸ್ ವಿ ಹೆಚ್ ಸಮೂಹ ಸಂಸ್ಥೆಗಳ ಕಾರ್ಯದರ್ಶಿಗಳಾದ ರತ್ನ ಕುಮಾರ್ ಸ್ಮಾರ್ಟ್ ಬೋರ್ಡ್ ಉದ್ಘಾಟಿಸಿ ಮಾತನಾಡಿ, ಬದಲಾಗುತ್ತಿರುವ ಕಾಲ ಘಟ್ಟಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳನ್ನು ಕಲಿತು ಮುಂದುವರೆದಾಗ ಮಾತ್ರ ಪರಿಪೂರ್ಣತೆ ಸಾಧ್ಯ.  ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಎಲ್ಲಾ ಕಡೆಯಿಂದ ಒಳ್ಳೆಯ ಜ್ಞಾನವನ್ನು ಪಡೆದು ಮುಂದುವರೆದಾಗ ಮಾತ್ರ ಪರಿಪೂರ್ಣತೆ ಸಾಧ್ಯ ಎಂದರು. 

ಸ್ಮಾರ್ಟ್ ಬೋರ್ಡ್ ಗಳನ್ನು ನೀಡಿದ ವಿಜಯ ರಾಘವೇಂದ್ರ ಬೆಂಗಳೂರು ಇವರು ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಬೋರ್ಡ್ ಬಗ್ಗೆ ಮಾಹಿತಿಯನ್ನು ನೀಡಿದರು.

ಸಂಸ್ಥೆಯ ಪ್ರಾಚಾರ್ಯ ರಾಜೇಂದ್ರ ಪ್ರಭು ರವರು ಸ್ವಾಗತಿಸಿ, ದಾನಿಗಳಿಗೆ ಕೃತಜ್ಞತೆ  ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

25 Jul 2026, 01:48 PM
Category: Kaup
Tags: