ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಕಾಪು ವಲಯ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆಯ್ಕೆ
Thumbnail

ಕಾಪು : ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಕಾಪು ವಲಯದ ನೂತನ ಕಾರ್ಯಕಾರಿ ರಚನಾ ಸಮಿತಿಯ ಸಭೆಯು ಕಾಪು JCI ಭವನದಲ್ಲಿ ಜರಗಿತು.

ಸಭೆಯಲ್ಲಿ  ತುಳುವರ್ಲ್ಡ್ ಫೌಂಡೇಶನ್, ಕಟೀಲು ಇದರ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಉಡುಪಿ ಜಿಲ್ಲಾಧ್ಯಕ್ಷ ಉದಯ ಕುಮಾರ್ ಹೆಗ್ಡೆ,  ಪ್ರಧಾನ ಕಾರ್ಯದರ್ಶಿ ವಸಂತ ರೈ ಕುತ್ತೆತ್ತೂರು, ತುಳುವ ಮಹಾಸಭೆ ಇಂಟರ್‌ನ್ಯಾಷನಲ್ ಪ್ರಧಾನ ಕಾರ್ಯದರ್ಶಿ ಅರವಿಂದ ಬೆಲ್ಚಡ  ಉಪಸ್ಥಿತರಿದ್ದರು.

ತುಳುವರ್ಲ್ಡ್ ಫೌಂಡೇಶನ್, ಕಟೀಲು ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಅವರು ತುಳುವರ್ಲ್ಡ್ ಫೌಂಡೇಶನ್ ಹಾಗೂ ತುಳುವ ಮಹಾಸಭೆ ಇಂಟರ್‌ನ್ಯಾಷನಲ್‌ನ ಉದ್ದೇಶಗಳು, ಕಾರ್ಯವೈಖರಿ, ಪಾತ್ರ ಹಾಗೂ ಜವಾಬ್ದಾರಿಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು.

ಬಳಿಕ ನಡೆದ ಸಮಾಲೋಚನೆಯಲ್ಲಿ ಸದಸ್ಯರೆಲ್ಲರ ಸರ್ವಾನುಮತದೊಂದಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷ ಯೋಗೇಶ್ ಶೆಟ್ಟಿ ಬಾಲಾಜಿ, ಅಧ್ಯಕ್ಷ  ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಉಪಾಧ್ಯಕ್ಷರುಗಳು ರಾಕೇಶ್ ಕುಂಜೂರು, ಪ್ರಭಾತ್ ಶೆಟ್ಟಿ ಮೂಳೂರು, ಶಿವಣ್ಣ ಬಾಯಾರ್, ಪ್ರಶಾಂತ್ ಶೆಟ್ಟಿ ಕುರ್ಕಾಲು, ಡಾ. ನಿರಂಜನ್ ಶೆಟ್ಟಿ, ವಲಯದ ಪ್ರಧಾನ ಸಂಚಾಲಕ ವಿಕ್ಕಿ ಪೂಜಾರಿ ಮಡುಂಬು, ಸಂಚಾಲಕ ದಿನೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಯುವ ಘಟಕ ಅಧ್ಯಕ್ಷೆ ಜಯಲಕ್ಷ್ಮಿ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ, ಮಹಿಳಾ ಉಪಾಧ್ಯಕ್ಷರು ವಿಜಯಲಕ್ಷ್ಮಿ ಆಚಾರ್ಯ, ಸುಮ ಶೆಟ್ಟಿ ಕುರ್ಕಾಲು, ಪ್ರಧಾನ ಕಾರ್ಯದರ್ಶಿ ಶ್ವೇತಾ ಎಲ್. ಶೆಟ್ಟಿ, ಜೊತೆ ಕಾರ್ಯದರ್ಶಿ ಸುಜಾತ ಸುವರ್ಣ, ದೀಕ್ಷಾ ಶೆಟ್ಟಿ ಆಯ್ಕೆಯಾಗಿರುತ್ತಾರೆ.

ಸಮಿತಿ ರಚನೆಯ ಬಳಿಕ ಉದಯ ಕುಮಾರ್ ಹೆಗ್ಡೆ ಹಾಗೂ ಭಾನುಮತಿ ಶೆಟ್ಟಿ ಕಕ್ವಗುತ್ತು ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಅಭಿನಂದಿಸಿ, ಅವರ ಮುಂದಿನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು.

ಸಂತೋಷ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Additional image
15 Aug 2026, 05:19 PM
Category: Kaup
Tags: