ಕಾಪು ತಾಲೂಕು - 80ನೇ ಸ್ವಾತಂತ್ರ್ಯ ದಿನಾಚರಣೆ
Thumbnail

ಕಾಪು : ತಾಲೂಕು ಆಡಳಿತದ ವತಿಯಿಂದ 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಶನಿವಾರ ‌ಕಾಪು ಪ್ರಥಮ ದರ್ಜೆ ಕಾಲೇಜಿನಲ್ಲಿ ಜರಗಿತು.

ಕಾಪು ತಹಶೀಲ್ದಾರರಾದ ಅಂನತ ಶಂಕರ್ ಅವರು ಧ್ವಜಾರೋಹಣ ನೆರವೇರಿಸಿದರು.

ಕಾಪು ತಾಲೂಕು ವ್ಯಾಪ್ತಿಯ ಪಿಲಾರು ಗ್ರಾಮದ ಶಾಂತ ಹಾಗೂ ಜಲಜ ಪೂಜಾರ್ತಿ, ಸಾಂತೂರು ಗ್ರಾಮದ ಇಂದಿರಾ ಸಾಲ್ಯಾನ್ ಅವರಿಗೆ ಹಕ್ಕುಪತ್ರವನ್ನು ಕಾಪು ಶಾಸಕರಾದ ಗರ್ಮೆ ಸುರೇಶ್ ಶೆಟ್ಟಿ ವಿತರಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ ಕುಮಾರ್, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಕಾಪು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

15 Aug 2026, 05:48 PM
Category: Kaup
Tags: