ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ : ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ
Thumbnail
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಬಿದ್ಕಲಕಟ್ಟೆ ಮೊಳಹಳ್ಳಿ, ಕೋಣಿಹಾರ ಗ್ರಾಮಕ್ಕೆ ಭೇಟಿನೀಡಿ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷದಿಗಳನ್ನು ನೀಡಲಾಯಿತು. ಮಾಜಿ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಹೆಗ್ಡೆ, ಮಾಜಿ ಪಂಚಾಯತ್ ಉಪಾಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ಹಾಗೂ ಪಂಚಾಯತ್ ಸದಸ್ಯರಾದ ಪ್ರಶಾಂತ್ ಕೊನಿ ದೀಪ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಸರೆ ತಂಡದ ಅಧ್ಯಕ್ಷರು ಆದ ಡಾ. ಕೀರ್ತಿ ಪಾಲನ್ ಅವರು ಈ ಕಾರ್ಯಕ್ರಮವನ್ನು ನೆರವೇರಿಸಿ, ಜನರಿಗೆ ಕೊರೊನ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಿ ಆರೋಗ್ಯ ತಪಾಸಣೆ ನಡೆಸಿದರು. ಈ ಕಾರ್ಯಕ್ರಮವನ್ನು ಮಾಜಿ ಸೈನಿಕ, ಕೋಣಿಹಾರ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಯಶವಂತ್ ಅವರು ಆಯೋಜಿಸಿದ್ದರು. ಈ ಕಾರ್ಯಕ್ರಮ ನಡೆಸಲು ವಿಠ್ಠಲ್ ಶೆಟ್ಟಿ ಸ್ಥಳಾವಕಾಶ ನೀಡಿದ್ದರು. ಗ್ರಾಮದ 72 ಜನ ಇಂದಿನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಆಸರೆ ತಂಡದ ಜಗದೀಶ್ ಬಂಟಕಲ್, ಬೇಬಿ ಶೆಟ್ಟಿ ಅಂಬಾಗಿಲು, ಕಾರ್ತಿಕ್ ಆಚಾರ್ಯ ಅಂಬಲ್ಪಾಡಿ, ಅರುಣ್ ಹಾಗೂ ದಿನೇಶ್ ರಾವ್ ಉಪಸ್ಥಿತರಿದ್ದರು.
Additional image
22 Nov 2020, 09:40 PM
Category: Kaup
Tags: