ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ : ಕಟಪಾಡಿ ಕಾರುಣ್ಯ ವೃದ್ಧಾಶ್ರಮ ಭೇಟಿ
Thumbnail
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಇಂದು ಭೇಟಿ ನೀಡಿ ಪ್ರತಿ ತಿಂಗಳು ನಡೆಸುವ ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಔಷಧಿ ನೀಡುವ ಜೊತೆಗೆ ತಂಡದ ಚಿರಪರಿಚಿತರಾದ ಸಿಲೋಮ್ ಅವರ ಹುಟ್ಟುಹಬ್ಬವನ್ನು ಅಲ್ಲಿಯ ವೃದ್ಧರಿಗೆ ಊಟ ಹಾಗೂ ಸಿಹಿ ಹಂಚುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು. ಊಟದ ವ್ಯವಸ್ಥೆಯನ್ನು ಮಾಡಿದ ಸಿಲೋಮ್ ಹಾಗೂ ಅವರ ಕುಟುಂಬಕ್ಕೆ ಧನ್ಯವಾದ ಸಮರ್ಪಿಸಲಾಯಿತು. ಡಾ. ಕೀರ್ತಿ ಪಾಲನ್ ಅವರು ಅಲ್ಲಿಯ ವೃದ್ಧ ಮಹಿಳೆಯರಿಗೆ ಸೀರೆ ಹಂಚಿದರು. ಆಸರೆ ತಂಡದ ಸ್ಥಾಪಕಾಧ್ಯಕ್ಷರು ಡಾ. ಕೀರ್ತಿ ಪಾಲನ್ ಈ ಕಾರ್ಯಕ್ರಮವನ್ನು ನೆರವೇರಿಸಿದರು. ಆಸರೆ ತಂಡದ ಜಗದೀಶ್ ಬಂಟಕಲ್, ಮೋಕ್ಷ ಪಾಲನ್ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Additional image Additional image
25 Nov 2020, 04:53 PM
Category: Kaup
Tags: