ಕಾಪು : ಜಾರ್ದೆ ಮಾರಿಪೂಜೆ ಸಂಪನ್ನ
Thumbnail
ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಜಾರ್ದೆ ಮಾರಿಪೂಜೆಯು ಧಾರ್ಮಿಕ ಪೂಜಾ ವಿಧಾನಗಳೊಂದಿಗೆ ಕಾಪುವಿನ ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಮೂರನೇ ಮಾರಿಗುಡಿಗಳಲ್ಲಿ ಸಂಪನ್ನಗೊಂಡಿತು. ಲಾಕ್ ಡೌನ್ ಸಂದರ್ಭ ನಡೆದ ಸುಗ್ಗಿ ಮಾರಿಪೂಜೆ, ಆಟಿ ಮಾರಿಪೂಜೆಗಳಲ್ಲಿಯೂ ದೇವಳದ ಅರ್ಚಕರು, ಸಿಬ್ಬಂದಿಗಳು ಮತ್ತು ಆಡಳಿತ ಮಂಡಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಮಾರಿ ಪೂಜೆಗೆ ಸರಕಾರದ ನಿರ್ದೇಶನದಂತೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದ್ದು ಸುಗ್ಗಿ, ಆಟಿ, ಜಾರ್ದೆ ಮಾರಿಪೂಜೆಯಲ್ಲಿ ಬಾಕಿ ಉಳಿಸಿದ ಹರಕೆಗಳನ್ನು ಸಮರ್ಪಿಸಲು ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ನಡೆಯುವ ಸುಗ್ಗಿ ಮಾರಿಪೂಜೆಗೆ ಅವಕಾಶ ನೀಡಲಾಗುವುದು ಎಂದು ಹೊಸ ಮಾರಿಗುಡಿ ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಹಳೆ ಮಾರಿಗುಡಿ ಆಡಳಿತ ಮೊಕ್ತೇಸರ ಪ್ರಸಾದ್ ಜಿ. ಶೆಣೈ, ಮೂರನೇ ಮಾರಿಗುಡಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ಬಂಗೇರ ತಿಳಿಸಿದ್ದಾರೆ. ಮಾರಿಪೂಜೆ ಸಂದರ್ಭ ಸಾರ್ವಜನಿಕರಿಗೆ ನಿರ್ಬಂಧವಿದ್ದರೂ ಭಕ್ತಾದಿಗಳ ಸಂದಣಿ ನಿಯಂತ್ರಿಸಲು ಮೂರು ದೇವಳಗಳಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
Additional image Additional image
25 Nov 2020, 08:34 PM
Category: Kaup
Tags: