ಉಂಡಾರು ಶ್ರೀವಿಷ್ಣುಮೂರ್ತಿ ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕದ ಉದ್ಘಾಟನೆ
Thumbnail
ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ತುಳು ಲಿಪಿಯ ನಾಮಫಲಕವನ್ನು ಸೋದೆ ಶ್ರೀವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಇದೇ ಸಂದರ್ಭ ಇನ್ನಂಜೆಯಲ್ಲಿ ನಡೆದ ತುಳುಲಿಪಿ ಕಲಿಕಾ ತರಬೇತಿಯಲ್ಲಿ ಪಾಲ್ಗೊಂಡು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಶ್ರೀಗಳು ವಿತರಿಸಿದರು. ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಶ್ರೀಮತಿ ತಾರಾ ಆಚಾರ್ಯ, ಜೈ ತುಲುನಾಡ್ ಸಂಸ್ಥೆಯ ಅಧ್ಯಕ್ಷರಾದ ಸುದರ್ಶನ್ ಸುರತ್ಕಲ್, ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕರಾದ ವಿಷ್ಣುಮೂರ್ತಿ ಮಂಜಿತ್ತಾಯ, ಇನ್ನಂಜೆಯ ಯುವತಿ ಮಂಡಲದ ಅಧ್ಯಕ್ಷೆ ಕುಮಾರಿ ಅನಿತಾ ಆಚಾರ್ಯ ಇನ್ನಂಜೆ ಮತ್ತಿತರರು ಉಪಸ್ಥಿತರಿದ್ದರು.
Additional image
24 Jan 2021, 07:51 PM
Category: Kaup
Tags: