ಉಡುಪಿ : ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಬಗ್ಗೆ ಕ್ಷೇತ್ರ ಮಟ್ಟದ ಕಾರ್ಯಕರ್ತರಿಗೆ ತರಬೇತಿ
Thumbnail
ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಬಗ್ಗೆ ಕ್ಷೇತ್ರ ಮಟ್ಟದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಶ್ರೀ ರಾಜಾರವರು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಶ್ರೀ ಜೋಸೆಫ್ ರೆಬೊಲ್ಲೋ ಜಲ ಸಂರಕ್ಷರಣೆ ಹಾಗೂ ಅಂತರ್ಜಲ ಪುನಶ್ಚೇತನ ವಿಷಯದ ಬಗ್ಗೆ ತರಬೇತಿ ನಡೆಸಿಕೊಟ್ಟರು. ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಉಡುಪಿಯ ಪ್ರಯೋಗಶಾಲಾ ತಂತ್ರಜ್ಙರು FTK ಕಿಟ್ ಮೂಲಕ ಗ್ರಾ.ಪಂ ಮಟ್ಟದಲ್ಲಿ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. 80 ಬಡಗಬೆಟ್ಟು ಗ್ರಾ.ಪಂ ನ SLRM ಮೇಲ್ವಿಚಾರಕಿ ಶ್ರೀಮತಿ ನೀರಜಾ ರವರು ತ್ಯಾಜ್ಯ ವಿಂಗಡಣೆ ಹಾಗೂ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು. ಪುಣ್ಯಕೋಟಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಉಡುಪಿ ವಿಭಾಗದ ಮುಖ್ಯಸ್ಥ ಶ್ರೀ ಗಿರೀಶ್ ಟಿ.ವಿ ತರಬೇತಿಯಲ್ಲಿ ಸಮನ್ವಯಕಾರರಾಗಿ ಭಾಗವಹಿಸಿದರು. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಮೋಹನ್ ರಾಜ್, ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಯೋಜನಾ ವ್ಯವಸ್ಥಾಪಕ ಶ್ರೀ ಸುಧೀರ್ ಎ.ಕೆ, ಸ್ವಚ್ಛ ಭಾರತ್ ಮಿಷನ್ ವಿಭಾಗದ ಶ್ರೀ ಪ್ರದೀಪ್, ಪುಣ್ಯಕೋಟಿ ಸಂಸ್ಥೆಯ ಕಾರ್ಯದರ್ಶಿ ಶ್ರೀ ಲಕ್ಷ್ಮೀ ನರಸಿಂಹಯ್ಯ, ಶ್ರೀ ನರೇಂದ್ರಬಾಬು ಹಾಗೂ ಸಿಬ್ಬಂಧಿಯವರು ಭಾಗವಸಿದರು. ತರಬೇತಿ ಕಾರ್ಯಾಗಾರದಲ್ಲಿ ಉಡುಪಿ ಆಸುಪಾಸಿನ 8 ಗ್ರಾಮ ಪಂಚಾಯತ್ ಗಳ 40 ಮಂದಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ ನೀರು ನಿರ್ವಾಹಕರು ಪಾಲ್ಗೊಂಡರು.
Additional image Additional image Additional image
25 Jan 2021, 09:33 AM
Category: Kaup
Tags: