ಮಟ್ಟಾರು : ಹಿಂದೂ ಮಿಲನ, ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ
Thumbnail
ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಟ್ಟಾರು ಘಟಕದ ನೇತೃತ್ವದಲ್ಲಿ ಹಿಂದೂ ಮಿಲನ ಕಾರ್ಯಕ್ರಮ ಫೆಬ್ರವರಿ 26, ಶುಕ್ರವಾರ ಮಟ್ಟಾರಿನಲ್ಲಿ ನಡೆಯಲಿದೆ. ಸಂಜೆ ಗಂಟೆ 3 ರಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಶ್ರೀ ವಿಷ್ಣುಮೂರ್ತಿ ಉಪಾಧ್ಯಾಯರ ನೇತೃತ್ವದಲ್ಲಿ ಅಸ್ಟಮ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ನಡೆಯಲಿದೆ. ಸಂಜೆ 6.30 ರಿಂದ 7.30 ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 7:30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಆಶೀರ್ವಚನ, ಮಂಗಳೂರು ವಿಭಾಗ ಧರ್ಮ ಜಾಗರಣ ಸಂಯೋಜಕರಾದ ಪ್ರಕಾಶ್ ಮಲ್ಪೆ ಇವರಿಂದ ದಿಕ್ಸೂಚಿ ಭಾಷಣ ಹಾಗೂ ರಾತ್ರಿ 9 ರಿಂದ ಅನ್ನಸಂತರ್ಪಣೆ ನಡೆಯಲಿದೆ. 9.30 ರಿಂದ ಕಲರ್ಸ್ ಕನ್ನಡ ಖ್ಯಾತಿಯ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕರುನಾಡ ಗಾನ ಗಂಧರ್ವ ಬಿರುದಾಂಕಿತ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
11 Feb 2021, 08:55 PM
Category: Kaup
Tags: