ಪಡುಬಿದ್ರಿ ಬ್ಲೂಫ್ಲಾಗ್ ಬೀಚ್ ನಲ್ಲಿ ನಮಾಜ್ ಮಾಡಿ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಖಂಡನೆ
ಕಾಪು ತಾಲೂಕಿನ ಪಡುಬಿದ್ರಿ ಬ್ಲೂಫ್ಲಾಗ್ ಬೀಚ್ ನಲ್ಲಿ ನಮಾಜ್ ಮಾಡಿ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ ಮಾಡಿರುವ ಪ್ರಕರಣ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುತ್ತದೆ.
ಈ ಪ್ರಕರಣವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾಧ್ಯಕ್ಷ ಪಿ.ವಿಷ್ಣುಮೂರ್ತಿ ಆಚಾರ್ಯ,ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಬಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖ್ ರಾಜೇಶ್ ಕೋಟ್ಯಾನ್,ಕಾಪು ಪ್ರಖಂಡ ಸಂಚಾಲಕ ಸುಧೀರ್ ಜಂಟಿಯಾಗಿ ತಿಳಿಸಿರುತ್ತಾರೆ.
ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ ಮಾಡಿರುವವರ ವಿರುಧ್ಧ ಕಾನೂನು ಕ್ರಮ ಕೈಗೊಂಡು ಮುಂದೆ ಈ ರೀತಿಯ ಪ್ರಕರಣ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಹಾಗೂ ಪೋಲಿಸ್ ಇಲಾಖೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮನವಿ ಮಾಡುತ್ತದೆ.
ಪಡುಬಿದ್ರಿ ಬೀಚ್ ಪ್ರವಾಸೋದ್ಯಮ ಪ್ರದೇಶವಾಗಿದ್ದು ಸ್ಥಳೀಯ ಹಾಗೂ ಹೊರಗಿನ ಅನೇಕರು ಇಲ್ಲಿಗೆ ಆಗಮಿಸುತ್ತಿದ್ದು ಅವರ ಸುರಕ್ಷತಾ ದೃಷ್ಟಿಯಿಂದ ಭದ್ರತಾ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಯ ಪ್ರದೇಶದಲ್ಲಿ ಈ ರೀತಿಯ ವರ್ತನೆ ಸರಿಯಲ್ಲ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ವರ್ತನೆಗಳು ಮರುಕಳಿಸಿದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಗ್ರವಾದ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.
