ಕುತ್ಯಾರು ಗ್ರಾಮ ಪಂಚಾಯತ್ ಗೆ ಸ್ವಚ್ಛ ಭಾರತ್ ಮಿಷನ್ ವಾಹನ
ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ ಉಡುಪಿ, ಕುತ್ಯಾರು ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಕುತ್ಯಾರು- ಕಳತ್ತೂರು ಗ್ರಾಮದ ಘನ ಮತ್ತು ದ್ರವ ಕಸ ವಿಲೇವಾರಿಗಾಗಿ ಹೊಸ ವಾಹನವನ್ನು ಮಾರುತಿ ಸುಜುಕಿ ಅಧಿಕಾರಿಗಳು ಮಾರ್ಚ್ 19ರಂದು ಗ್ರಾಮ ಪಂಚಾಯತ್ ಗೆ ಹಸ್ತಾಂತರಿಸಿದರು.
ಈ ಸಂದರ್ಭ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಎಸ್. ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಜನಿ ಭಟ್, ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ ಆಚಾರ್ಯ, ಗಣೇಶ್ ಶೆಟ್ಟಿ ಪೈಯ್ಯರು, ಎವುಜಿನ್ ಲೋಬೋ, ಸಂಪತ್ ಕುಮಾರ್, ಕೃಷ್ಣ ಕುಲಾಲ್, ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
