ಶ್ರೀ ಗುರು ರಾಘವೇಂದ್ರ ಮಹಿಳಾ ಭಜನಾ ಮಂಡಳಿ 92 ಹೇರೂರು : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ
ಕಾಪು : ಶ್ರೀ ಗುರು ರಾಘವೇಂದ್ರ ಮಹಿಳಾ ಭಜನಾ ಮಂಡಳಿ 92 ಹೇರೂರು ಇದರ ಮಹಾಸಭೆಯು ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.
2019 - 20ನೆಯ ವರ್ಷದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಸುಕನ್ಯಾ ಜೋಗಿಯವರು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದರು. ಅಧ್ಯಕ್ಷರಾದ ಶ್ರೀಮತಿ ವಸಂತಿ ಆಚಾರ್ಯರವರು ಸರ್ವರನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಸಮಾಜ ಸೇವಾ ಮಂಡಳಿಯ ಅಧ್ಯಕ್ಷರಾದ ಸುಜಿತ್ ಕುಮಾರ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ನಿಯೋಜಿತ ಅಧ್ಯಕ್ಷರಾದ ಶ್ರೀನಿವಾಸ ದೇವಾಡಿಗ, ಕಾರ್ಯದರ್ಶಿ ನಿತ್ಯಾನಂದ ಆಚಾರ್ಯ, ಶಂಕರ್ ದೇವಾಡಿಗ ಉಪಸ್ಥಿತರಿದ್ದರು.
2021- 22ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ದಿನೇಶ್ ದೇವಾಡಿಗ, ಉಪಾಧ್ಯಕ್ಷರಾಗಿ ಶ್ರೀಮತಿ ಸರಸ್ವತಿ ಶ್ರೀಧರ ಕಾಮತ್, ಕಾರ್ಯದರ್ಶಿಯಾಗಿ ಪವಿತ್ರ ಪ್ರಕಾಶ್ ರಾವ್, ಕೋಶಾಧಿಕಾರಿಯಾಗಿ ಆಶಾ ವಿಶ್ವನಾಥರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಶ್ರೀಮತಿ ಸುಕನ್ಯಾ ಜೋಗಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
