ಕಾಪು : ಕಳೆದ ನವೆಂಬರ್ ತಿಂಗಳಲ್ಲಿ ಬಂಟಕಲ್ಲು ದೇವಸ್ಥಾನ ಸಮೀಪದ ಶ್ರೀಮತಿ ವಸಂತಿ ಎಂಬವರಲ್ಲಿ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದರೋಡೆಗೈದ ಪ್ರಕರಣವನ್ನು ಬೇಧಿಸಿ, ದರೋಡೆಕೋರನನ್ನು ಬಂಧಿಸಿ ಚಿನ್ನದ ಸರವನ್ನು ವಶಪಡಿಸಿ ಮರಳಿ ಮಹಿಳೆಗೆ ಹಿಂತಿರುಗಿಸುವಲ್ಲಿ ಕರ್ತವ್ಯ ನಿರ್ವಹಿಸಿ , ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾದ ಕಾಪು ವೃತ್ತನಿರೀಕ್ಷರಾದ ಪ್ರಕಾಶ್, ಕ್ರೈಮ್ ಸಿಬ್ಬಂದಿಗಳಾದ ಪ್ರವೀಣ್, ರಾಜೇಶ್ ಹಾಗೂ ಸಿಬ್ಬಂದಿಯವರನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ವತಿಯಿಂದ ವೃತ್ತನಿರೀಕ್ಷಕರ ಕಛೇರಿಯಲ್ಲಿ ಶಾಲು ಹೊದಿಸಿ ಅಭಿನಂದಿಸಲಾಯಿತು.
ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಕೆ.ಆರ್. ಪಾಟ್ಕರ್, ಉಪಾಧ್ಯಕ್ಷ ಪುಂಡಲೀಕ ಮರಾಠೆ, ಕಾರ್ಯದರ್ಶಿ ದಿನೇಶ್ ದೇವಾಡಿಗ, ಕೊಶಾಧಿಕಾರಿ ಜಗದೀಶ್ ಆಚಾರ್ಯ, ಉಮೇಶ್ ರಾವ್, ವೃತ್ತ ನಿರೀಕ್ಷಕರ ಕಛೇರಿ ಸಿಬ್ಬಂದಿಯವರು ಉಪಸ್ಥಿತರಿದ್ದರು.