ಕಾಪು : ಕಾಪು ತಾಲೂಕಿನ ಮಂಡೇಡಿ, ಇನ್ನಂಜೆಯ
ಶ್ರೀ ದೇವಿ ಭಜನಾ ಮಂಡಳಿಯ ವಾರ್ಷಿಕೋತ್ಸವದ ಪ್ರಯುಕ್ತ 43ನೇ ಭಜನಾ ಮಂಗಲೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಹಾ ಅನ್ನಸಂತರ್ಪಣೆಯು ಏಪ್ರಿಲ್ 22, ಗುರುವಾರ
ನಡೆಯಲಿದೆ.
ಏಪ್ರಿಲ್ 22, ಗುರುವಾರ ಬೆಳಿಗ್ಗೆ ಗಂಟೆ 10 ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 12 ಕ್ಕೆ ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 1ರಿಂದ ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6ರಿಂದ ದೀಪ ಪ್ರತಿಷ್ಠೆಯೊಂದಿಗೆ ವಿವಿಧ ಭಜನಾ ಮಂಡಳಿಯವರಿಂದ ಭಜನೆ ಆರಂಭ, ಪ್ರಾತಃ ಕಾಲ ರಾತ್ರಿ ಗಂಟೆ 12-30ಕ್ಕೆ ಭಜನಾ ಮಂಗಳೋತ್ಸವ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.