ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ
Posted On:
01-05-2021 02:09PM
ಕಾಪು : ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಲಾಲಾಜಿ ಆರ್. ಮೆಂಡನ್ ಭೇಟಿ ನೀಡಿ ಆಸ್ಪತ್ರೆಯ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲಿಸಿ ಸಭೆ ನಡೆಸಿದ ಮಾನ್ಯ ಶಾಸಕರು ದಾನಿಗಳ ಮುಖಾಂತರ ಆಕ್ಸಿಜನ್ ವ್ಯವಸ್ಥೆ ಆರಂಭಿಸಿ, ಆಸ್ಪತ್ರೆಗೆ ಬರುವ ಒಳ ಹಾಗೂ ಹೊರ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದೆ, ಆಸ್ಪತ್ರೆಗೆ ಕೋವಿಡ್ -19 ವಾಕ್ಸಿನ್ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಮುಂದಿನ ದಿನಗಳಲ್ಲಿ ಸ್ಥಳೀಯರ ನೆರವಿನೊಂದಿಗೆ ಸಮರ್ಪಕವಾಗಿ ಜನಸಂದಣಿಯಾಗದೆ ಸೂಕ್ತವ್ಯವಸ್ಥೆಯೊಂದಿಗೆ ಮಾಡುವುದಾಗಿ ಹಾಗೂ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ, ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದೆ ಆಸ್ಪತ್ರೆ ಕಾರ್ಯನಿರ್ವಹಿಸಲಿದೆ ಎಂದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋದ, ಹೆಜಮಾಡಿ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ್, ತಾಲೂಕು ಪಂಚಾಯತ್ ಸದಸ್ಯರಾದ ನೀತಾ ಗುರುರಾಜ್, ಸ್ಥಳೀಯರಾದ ಪ್ರಕಾಶ್ ಶೆಟ್ಟಿ, ಸುರೇಶ್ ಹಾಗೂ ವೈದ್ಯಾಧಿಕಾರಿ ರಾಜಶ್ರೀ, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.