ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಗ್ರಾಮ ಪಂಚಾಯತ್ ವತಿಯಿಂದ ಕೋವಿಡ್ 19 ಜಾಗೃತಿ ಪ್ರಚಾರ ವಾಹನಕ್ಕೆ ಚಾಲನೆ

Posted On: 15-05-2021 06:03PM

ಕಾಪು : ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೋವಿಡ್ 19 ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಹಾಗೂ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ವಾಹನಕ್ಕೆ ಶಿರ್ವ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಕೆ. ಆರ್. ಪಾಟ್ಕರ್ ರವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಬಂಟಕಲ್ಲು ನಾಗರಿಕ ಸೇವಾ ಸಮಿತಿಯವರು ಪ್ರಚಾರ ವಾಹನವನ್ನು ಒದಗಿಸಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಅನಂತಪದ್ಮನಾಭ ನಾಯಕ್, ಗ್ರಾಮ ಕರಣಿಕರಾದ ವಿಜಯ್, ಪೋಲೀಸ್ ಠಾಣೆಯ ಆಂದಪ್ಪ, ಎಸ್. ರಮಾನಂದ್, ವಿರೇಂದ್ರ ಪಾಟ್ಕರ್, ಪಂಚಾಯತ್ ಸಿಬ್ಬಂದಿ ಪ್ರೇಮನಾಥ್ ಉಪಸ್ಥಿತರಿದ್ದರು.