ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಆಹಾರ ಪ್ಯಾಕೆಟ್ ವಿತರಣೆ

Posted On: 24-05-2021 09:53PM

ಉಡುಪಿ : ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಸಣ್ಣ ಕ್ಯಾಂಟೀನ್ ನಡೆಸುತ್ತಿರುವ ಓರ್ವ ವ್ಯಕ್ತಿಗೆ ಏನಾದರೂ ವ್ಯಾಪಾರ ಆಗಲಿ ಅದೇ ರೀತಿ ಅಗತ್ಯ ವಸ್ತುಗಳನ್ನು ಸಾಗಾಟ ಮಾಡುವ ಟ್ರಕ್, ಲಾರಿ ಇತರೆ ವಾಹನಗಳ ಚಾಲಕರಿಗೆ ಸುಲಭವಾಗಿ ಉಚಿತವಾಗಿ ಆಹಾರ ಸಿಗಲಿ ಎಂಬ ಉದ್ದೇಶದಿಂದ ಆರಂಭಿಸಿರುವ ಅಗತ್ಯ ವಸ್ತುಗಳ ಸಾಗಾಟ ಮಾಡುವ ಲಾರಿ ಚಾಲಕರಿಗೆ ಆಹಾರ ಪ್ಯಾಕೆಟ್ ನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶ್ ಪ್ರಸಾದ್, ರಾಘವೇಂದ್ರ ಪ್ರಭು ಕರ್ವಾಲು, ಸತೀಶ್ ಸುವರ್ಣ ಆದಿಉಡುಪಿ, ಸಂತೋಷ್ ನಾಯ್ಕ್, ಉದಯ ನಾಯ್ಕ್ ಉಪಸ್ಥಿತರಿದ್ದರು.