ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ ಜಿಲ್ಲೆಯ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ದೈವ ಚಾಕ್ರಿ ವರ್ಗದವರ ಸಮಸ್ಯೆ ಕುರಿತು ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಮನವಿ

Posted On: 24-06-2021 06:39PM

ಉಡುಪಿ : ಲಾಕ್ಡೌನ್ ಸಂದರ್ಭ ದೈವ ಚಾಕ್ರಿ ವರ್ಗದವರ ಸಮಸ್ಯೆಗಳ ಕುರಿತಂತೆ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ಸರ್ವ ಸದಸ್ಯರು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಭೇಟಿ ಮಾಡಿ ಮನವಿ ನೀಡಿದರು.

ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ ಸರ್ಕಾರ ನಮ್ಮ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ದುಡಿಯುವವರಿಗೆ ಈ ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ಯಾವುದೇ ಪರಿಹಾರ ಒದಗಿಸಿಲ್ಲ. ಎರಡು ವರ್ಷದಿಂದ ಸರಿಯಾಗಿ ಯಾವುದೇ ಪೂಜೆ ಪುರಸ್ಕಾರ, ವಾರ್ಷಿಕ ನೇಮೋತ್ಸವಗಳು ಯಾವುದೇ ಇತರ ಕಾರ್ಯಗಳು ನಡೆಯಲಿಲ್ಲ. ಈ ಸಂದರ್ಭದಲ್ಲಿ ಸರ್ಕಾರ ಸಂಪೂರ್ಣ ನಿಷೇಧಿಸಿದೆ. ಸುಮಾರು ಉಡುಪಿ ಮಂಗಳೂರಿನಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ದೈವ ಚಾಕ್ರಿ ವರ್ಗದವರಿದ್ದಾರೆ. ಕೊರೊನ ಲಾಕ್ ಡೌನ್ ಸಂದರ್ಭದಲ್ಲಿ ಇವರಿಗೆ ಜೀವನ ನಡೆಸಲು ತುಂಬಾ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಇವರಿಗೆ ಯಾವುದೇ ಸಂಪಾದನೆ ಇಲ್ಲ ದೈವಾರಾಧನೆ ಮೂಲ ಕುಲಕಸುಬಾಗಿ ಅವಲಂಬಿಸಿದ್ದಾರೆ. ಇದರಿಂದ ಬರುವ ಸಂಭಾವನೆಯಲ್ಲಿ ಕುಟುಂಬವನ್ನು ನೀಗಿಸಬೇಕಾಗಿದೆ. ಮುಂದಿನ ದಿನಗಳಲ್ಲಿ 200 ಜನರ ಸೀಮಿತ ಅವಧಿಗೆ ಸರ್ಕಾರದ ಕಟ್ಟುನಿಟ್ಟಾದ ನಿಯಮ ಅನುಸಾರವಾಗಿ ದೈವಾರಾಧನೆಗೆ ಅನುಮತಿ ನೀಡಬೇಕಾಗಿದೆ ಎಂದು ಒಕ್ಕೂಟದ ಗೌರವ ಅಧ್ಯಕ್ಷರು ಹಾಗೂ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭ ಮಾತನಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಈ ದಿನವೇ ಮುಖ್ಯಮಂತ್ರಿಗಳಿಗೆ ನಿಮ್ಮ ಬೇಡಿಕೆಗಳ ಮನವಿಯನ್ನು ಕಳುಹಿಸಿಕೊಡುತ್ತೇನೆ. ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಅಧ್ಯಕ್ಷರಾದ ರವಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ, ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಶ್ರೀಧರ್ ಪೂಜಾರಿ, ಉಪಾಧ್ಯಕ್ಷರಾದ ಸುಧಾಕರ್ ಮಡಿವಾಳ, ಅನಿಶ್ ಕೋಟ್ಯಾನ್, ನರಸಿಂಹ ಪರವ, ಕಾರ್ಯದರ್ಶಿಯಾದ ರವೀಶ್ ಕಾಮತ್, ದಯೆಶಾ ಕೋಟ್ಯಾನ್, ರಕ್ಷಿತ್ ಕೋಟ್ಯಾನ್, ಗೌರವ ಹಿತೈಷಿಗಳಾದ ನವೀನ್, ಹೆಬ್ರಿ ಘಟಕದ ಅಧ್ಯಕ್ಷರಾದ ಸುಕುಮಾರ್ ಪೂಜಾರಿ, ವಿಠ್ಠಲ್ ಪೂಜಾರಿ, ಸಂತೋಷ್ ಪೂಜಾರಿ, ನಂದಿ ಪೂಜಾರಿ, ರಂಗ ಪಾಣಾರ, ಸಂತೋಷ್ ಪಾಣಾರ, ಸರ್ವ ಸದಸ್ಯರು ಉಪಸ್ಥಿತಿಯಿದ್ದರು.