ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪೋಲಿಸರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳ ನಾಶ

Posted On: 26-06-2021 04:39PM

ಪಡುಬಿದ್ರಿ : ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ತಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವೈಯರ್ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್ ಕುಮಾರ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಉಡುಪಿ ಡಿವೈಎಸ್ಪಿ ಸುಧಾಕರ ನಾಯ್ಕ್ , ಕಾರ್ಕಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್,ವೃತ್ತನಿರೀಕ್ಷಕರಾದ ಮಂಜುನಾಥ್,ಸಂಪತ್,ಮಂಜುನಾಥ ಗೌಡ, ಪ್ರಮೋದ್ ಹಾಗು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.