ಮನೆ ಮನೆಗೆ ಗಂಗೆ ಯೋಜನೆಯ ಜೀವನಾಡಿ ನೀರು ಮತ್ತು ನೈರ್ಮಲ್ಯ ಸಮಿತಿ: ಭವಾನಿಶಂಕರ್
Posted On:
18-07-2021 02:50PM
ಸುಳ್ಯ : ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಜೀವನಾಡಿಯಂತೆ ಎಂದು ಸುಳ್ಯ ತಾಲ್ಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಹೇಳಿದರು. ಸುಳ್ಯ ತಾಲ್ಲೂಕು ಪಂಚಾಯತಿಯಲ್ಲಿ
ಸುಳ್ಯ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ ನಡೆದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಪಾತ್ರದ ಬಗ್ಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸುಂದರ್ ವಿವರಿಸಿದರು. ಜಲಜೀವನ್ ಮಿಷನ್ ದ್ಯೇಯೋದ್ದೇಶಗಳ ಕುರಿತು ಜೆಜೆಎಮ್ ಜಿಲ್ಲಾ ಮುಖ್ಯಸ್ಥ ಶಿವರಾಮ್ ಪಿ.ಬಿ ಅವರು ಮಾತನಾಡಿದರು.
ಎಫ್.ಟಿ.ಕೆ ಕಿಟ್ ಪರೀಕ್ಷಾ ವಿಧಾನದ ಬಗ್ಗೆ ಪ್ರಯೋಗಾಲಯದ ಸಿಬ್ಬಂದಿ ಶ್ರೀ ಕೃಷ್ಣ ಅವರು ಪ್ರಾತ್ಯಕ್ಷಿಕೆ ನೀಡಿದರು.
ಸ್ವಚ್ಛ ಭಾರತ್ ಇದರ ಜಿಲ್ಲಾ ಐಇಸಿ ಸಂಯೋಜಕರಾದ ಡೊಂಬಯ್ಯ ಅವರು, ರಾಜ್ಯದ ಎಲ್ಲಾ ಗ್ರಾಮಗಳ ಸಂಪೂರ್ಣ ಸ್ವಚ್ಛತೆಗೆ ಪೂರಕವಾದ ಚಟುವಟಿಕೆಗಳನ್ನು ಸ್ವಚ್ಛ ಭಾರತ್ ಮಿಷನ್(ಗ್ರಾಮೀಣ) ಅಡಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅನುಷ್ಠಾನ ಪ್ರಗತಿ ಪರಿಶೀಲನೆ ಚರ್ಚೆ ನಡೆಯಿತು.ಅನುಷ್ಠಾನ ಬೆಂಬಲ ಸಂಸ್ಥೆಯ ಸಿಬ್ಬಂದಿಗಳಾದ ಮಹಾಂತೇಶ್ ಹಿರೇಮಠ್,ದಯಾನಂದ.ಜಿ ಸಹಕರಿಸಿದರು. ದ.ಕ ಜಿಲ್ಲಾ ಪಂಚಾಯತ್ ಗ್ರಾ.ಕು.ನೀ,ನೈ ಇಲಾಖೆ, ತಾ.ಪಂ, ಸಮುದಾಯ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತರಬೇತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಭಾಗವಹಿಸಿದ್ದರು.ತಾ.ಪಂ ಸಿಬ್ಬಂದಿಗಳು ಸಹಕರಿಸಿದರು.