ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚಿತ ನೇತ್ರ ತಪಾಸಣಾ ಶಿಬಿರಗಳೆಂದರೆ ಕತ್ತಲಿನಿಂದ ಬೆಳಕಿನಡೆಗೆ ಹೋಗುವ ಕಾರ್ಯಕ್ರಮ : ಗೀತಾಂಜಲಿ ಸುವರ್ಣ

Posted On: 29-07-2021 11:02PM

ಪಡುಬಿದ್ರಿ : ಉಚಿತ ನೇತ್ರ ತಪಾಸಣಾ ಶಿಬಿರಗಳೆಂದರೆ ಕತ್ತಲಿನಿಂದ ಬೆಳಕಿನಡೆಗೆ ಹೋಗುವ ಒಂದು ಕಾರ್ಯಕ್ರಮ ಇಂತಹ ಜನಪರ ಕಾರ್ಯಕ್ರಮಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಆ ಮೂಲಕ ಬದುಕಿನಲ್ಲಿ ಆವರಿಸಿಕೊಂಡಿರುವ ಕತ್ತಲಿನಿಂದ ದೂರವಾಗಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಹೇಳಿದರು.

ಅವರು ಪಡುಬಿದ್ರಿಯ ಸುಸ್ಲಾನ್ ಆರ್ ಎಂಡ್ ಆರ್ ಕಾಲೊನಿಯಲ್ಲಿ ಕರ್ನಾಟಕ ಸಾಮಾಜಿಕ ಸಾಂಸ್ಕತಿಕ ಅಭಿವೃದ್ಧಿ ಪ್ರತಿಷ್ಠಾನವು ಪ್ರಸಾದ್ ನೇತ್ರಾಲಯ ಜೊತೆಗೂಡಿ ಆಯೋಜಿಸಿದ ಉಚಿತ ನೇತ್ರ ತಪಾಸಣಾ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಸಂಘಟಕರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಸಾರ್ವಜನಿಕರ ಸ್ಪಂದನೆ ಸರಿಯಾಗಿದ್ದಾಗ ಕಾರ್ಯಕ್ರಮಕ್ಕೆ ಹೆಚ್ಚು ಮೆರುಗು ಬರುತ್ತದೆ ಎಂದು ಹೇಳಿದ ಅವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ KSSAP ಕಾರ್ಯ ಸ್ತುತ್ಯರ್ಹ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮಾತನಾಡಿ ಇಂದು ಮಾತಿಗಿಂತ ಕೃತಿಗೆ ಹೆಚ್ಚು ಒತ್ತು ಕೊಡಬೇಕಾಗಿದೆ, ಈ ಕಾರ್ಯಕ್ರಮದಿಂದ ಹೆಚ್ಚಿನ ಜನರು ಪ್ರಯೋಜನ ಪಡೆದು ತಮ್ಮ ಕಣ್ಣಿನಲ್ಲಿ ಬೆಳಕು ಮೂಡಿದರೆ ನಮ್ಮ ಶ್ರಮ ಸಾರ್ಥಕ ಎಂದರು. ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯದ ಡಾ. ಗುಣಶ್ರೀ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿಶೆಟ್ಟಿ, ಸುಸ್ಲಾನ್ ಆರ್.& ಆರ್. ಕಾಲೊನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮನಾಥ್ ಕೆ. ಆರ್. ಉಪಸ್ಥಿತರಿದ್ದರು. NSCDF ಅಧ್ಯಕ್ಷ ಗಂಗಾಧರ್ ಗಾಂದಿ ಸ್ವಾಗತಿಸಿ , ಪ್ರಸ್ತಾವನೆಗೈದರು. ಪ್ರದೀಪ್ ಡಿ.ಎಂ. ಹಾವಂಜೆ ನಿರೂಪಿಸಿದರು.