ಯುವವಾಹಿನಿ ಕಾಪು ಘಟಕ ಮತ್ತು ಬಿರುವೆರ್ ಕಾಪು ಸೇವಾ ಟ್ರಸ್ಟ್ ಆಶ್ರಯದಲ್ಲಿ ಆಟಿಡೊಂಜಿ ದಿನ ಮತ್ತು ಸನ್ಮಾನ ಕಾರ್ಯಕ್ರಮ
Posted On:
05-08-2021 02:12PM
ಕಾಪು : ಯುವವಾಹಿನಿ ಕಾಪು ಘಟಕ ಉತ್ತಮವಾದ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಇಂತಹ ಕಾರ್ಯಕ್ರಮ ಆಯೋಜಿಸುವ ಮೂಲಕ ಘಟಕವು ಅಭಿನಂದನಾರ್ಹವಾಗಿದೆ ಎಂದು ಬಿಲ್ಲವ ಸಂಘ ಕಾಪು ಇದರ ಗೌರವಾಧ್ಯಕ್ಷ ಪ್ರಭಾಕರ್ ಪೂಜಾರಿ ಹೇಳಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕಾಪು ಘಟಕ ಮತ್ತು ಬಿರುವೆರ್ ಕಾಪು ಸೇವಾ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಕಾಪುವಿನ ಲೈಟ್ ಹೌಸ್ ಬೀಚ್ ರೆಸಾರ್ಟ್‌ನಲ್ಲಿ ನಡೆದ ಆಟಿಡೊಂಜಿ ದಿನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚೆನ್ನೆಮಣೆ ಆಟ ಆಡುವ ಮೂಲಕ ಕಾರ್ಯಕ್ರಮವನ್ನು ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಿತೇಶ್ ಕೋಟ್ಯಾನ್ ಮತ್ತು ಬಿಲ್ಲವ ಸಂಘ ಕಾಪು ಇದರ ಗೌರವಾಧ್ಯಕ್ಷ ಪ್ರಭಾಕರ್ ಪೂಜಾರಿ ಉದ್ಘಾಟಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಿತೇಶ್ ಕೋಟ್ಯಾನ್ ಮಾತನಾಡಿ ಹಿಂದಿನ ಕಾಲದಲ್ಲಿ ಆಟಿಯಲ್ಲಿ ಒಂದು ದಿವಸ ಎಂಬ ಕಲ್ಪನೆಯೇ ಇರಲಿಲ್ಲ. ಆಗ ಮಾಡುತ್ತಿದ್ದ ತಿನಿಸುಗಳನ್ನು ಇಂದು ಆಟಿಯಲ್ಲಿ ಒಂದು ದಿವಸ ಎಂಬ ಕಾರ್ಯಕ್ರಮಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ ಎಂದರು.
ಸನ್ಮಾನ : ಸಾಮಾಜಿಕವಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಜೆಸಿಐ ಅಧ್ಯಕ್ಷೆ ಅರುಣಾ ಐತಾಳ್ ಮತ್ತು ಯುವ ಚಿತ್ರಕಲಾವಿದೆ ರಕ್ಷಾ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ಆಟಿಡೊಂಜಿ ಕಾರ್ಯಕ್ರಮದ ಅಂಗವಾಗಿ ಸುಮಾರು 30 ಬಗೆಯ ತುಳುನಾಡ ಖಾದ್ಯಗಳನ್ನು ಉಣಬಡಿಸಲಾಯಿತು.
ಈ ಸಂದರ್ಭ ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಿತೇಶ್, ಕಾರ್ಯಕ್ರಮ ನಿರ್ದೇಶಕರಾದ ಸೂರ್ಯನಾರಾಯಣ್, ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ಸೌಮ್ಯ ರಾಕೇಶ್, ಕಾರ್ಯದರ್ಶಿ ಸುಧಾಕರ್, ಬಿರುವೆರ್ ಕಾಪು ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಬಾಲಕೃಷ್ಣ ಆರ್. ಕೋಟ್ಯಾನ್, ಕಾರ್ಯದರ್ಶಿ ವಿಕ್ಕಿ ಪೂಜಾರಿ ಮಡುಂಬು ಉಪಸ್ಥಿತರಿದ್ದರು.
ಪತ್ರಕರ್ತ ರಾಕೇಶ್ ಕುಂಜೂರು ಕಾರ್ಯಕ್ರಮ ನಿರ್ವಹಿಸಿದರು.