ಮಂಗಳೂರು : ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಇಲ್ಲಿ ನಡೆದ ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ, ಸಮನ್ವಯಾಧಿಕಾರಿಗಳು ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಹಾಜರಿದ್ದ ಶಿಕ್ಷಕರ ದಿನಾಚರಣೆ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಬಂಟ್ವಾಳ ತಾಲೂಕಿನ ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮುರಳಿಕೃಷ್ಣ ರಾವ್ ಇವರಿಗೆ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಲು ತೀರ್ಮಾನಿಸಲಾಯಿತು.
ಸರಳ ಸಜ್ಜನಿಕೆಯ ಚಿತ್ರಕಲಾ ಶಿಕ್ಷಕರಾಗಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುದಕ್ಕೆ ಶಿಷ್ಯವೃಂದ ಹಾಗೂ ಹಿತೈಷಿಗಳು ಸಂತಸ ವ್ಯಕ್ತಪಡಿಸಿದ್ದಾರೆ.