ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಬಗ್ಗೆ ವ್ಯಕ್ತಿಯೋರ್ವರ ಮೇಲೆ ಕಿರಣ್ ಪೂಜಾರಿ ಎಂಬುವವರು ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಕುಂಭಾಶಿ ಮೂಲದ ಪತ್ರಿಕೆಯ ಸಂಪಾದಕರೋರ್ವರು ಸರ್ವರೂ ಸಮಾನರು ಎಂದು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದರು. ಇದರ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶವು ವ್ಯಕ್ತವಾಗಿತ್ತು. ಆದರೆ ಇದೀಗ ಅಂತಹ ಪೋಸ್ಟ್ ಹಾಕಿದ ವ್ಯಕ್ತಿಯ ಮೇಲೆ ಕಾನೂನು ಕ್ರಮಕ್ಕಾಗಿ ದೂರುದಾಖಲಾಗಿದೆ ಮತ್ತು ಆ ವ್ಯಕ್ತಿ ನಾರಾಯಣಗುರುಗಳ ಪ್ರತಿಮೆಯ ಮುಂದೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.