ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸೆಪ್ಟೆಂಬರ್ 21ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.