ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದಿಂದ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Posted On: 19-09-2021 02:17PM

ಉಡುಪಿ : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ ಜಿಲ್ಲೆ ವತಿಯಿಂದ ವೃತ್ತಿ ಭಾಂದವರ ಮಕ್ಕಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಭಾಧ್ಯಕ್ಷತೆಯನ್ನು ಅಧ್ಯಕ್ಷರಾದ ಎಮ್. ಮಹೇಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯು. ಮೋಹನ್ ಉಪಾಧ್ಯ ಹಾಗೂ ಅತಿಥಿಯಾಗಿ ಬಿ. ಜಿ. ಸುಬ್ಬರಾವ್, ಗೌರವ ಸಲಹೆಗಾರ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸುಮಂತ್ ಕಾರಂತ್, ಸುಹಾಸ್ ಸಿ ನೈರಿ, ಯಶ್ಮಿತಾ ಎಮ್ ಬಂಗೇರ. ತ್ರಿಷಾ ಎಸ್ ಶೆಟ್ಟಿ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅತಿಥಿ ಬಿ ಜಿ ಸುಬ್ಬರಾವ್ ಅದೃಷ್ಟ ವ್ಯಕ್ತಿ ಸುಮಂತ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಪ್ರಾರ್ಥನೆಯನ್ನು ಸುಮಂತ್ ಕಾರಂತ್ ನೆರವೇರಿಸಿದರು. ಎಮ್. ಮಹೇಶ್ ಕುಮಾರ್ ರವರು ಎಲ್ಲರನ್ನು ಸ್ವಾಗತಿಸಿ, ಅಶೋಕ್ ಶೆಟ್ಟಿ ಯವರು ಪ್ರಸ್ತಾವಿಸಿ, ರಮೇಶ್ ಕುಂದರ್ ಕಾರ್ಯಕ್ರಮ ನಿರ್ವಹಿಸಿ , ಕೋಶಾಧಿಕಾರಿ ಸುಧೀರ್ ಡಿ. ಬಂಗೇರ ವಂದಿಸಿದರು.