ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರದ ಸಭೆ

Posted On: 22-09-2021 08:51PM

ಕಾಪು, ಸೆ.22 : ಕಾಪು ಬಿಜೆಪಿ ಕಚೇರಿಯಲ್ಲಿ ಶಕ್ತಿಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರ ಪ್ರಮುಖರ ಸಭೆ ನಡೆಯಿತು. ಮೋದಿ ಜನ್ಮದಿನದಿಂದ ಅ.07 ರ ವರೆಗಿನ ಸೇವೆ ಮತ್ತು ಸಮರ್ಪಣೆ ಕಾರ್ಯಕ್ರಮದ ಕುರಿತಂತೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿಸ್ತ್ರತವಾಗಿ ಮಾಹಿತಿ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು ಎಲ್ಲ ಶಕ್ತಿಕೇಂದ್ರ ಪ್ರಮುಖರು ಮಹಾಶಕ್ತಿ ಕೇಂದ್ರ ಪ್ರಮುಖರೊಡನೆ ನಿರಂತರ ಸಂಪರ್ಕದಲ್ಲಿದ್ದು ಪ್ರತಿಯೊಂದು ಕಾರ್ಯಕ್ರಮವನ್ನೂ ಬೂತ್ ಮಟ್ಟದಲ್ಲಿಯೂ ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.

ಗಾಂಧಿ ಜಯಂತಿಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಉಪಾಧ್ಯಕ್ಷರೂ ಕಾರ್ಯಕ್ರಮದ ಜಿಲ್ಲಾ ಸಂಚಾಲಕರೂ ಆದ ಸುಪ್ರಸಾದ್ ಶೆಟ್ಟಿ ವಿವರಿಸಿದರು. ಪರಿಸರ ಸಂಬಂಧಿತ ವಿಷಯದ ಜಿಲ್ಲಾ ಸಂಚಾಲಕರೂ, ಜಿಲ್ಲಾ ರೈತ ಮೋರ್ಚ ಅಧ್ಯಕ್ಷರಾದ ಪ್ರವಿಣ್ ಗುರ್ಮೆ ಇವರೂ ಮಾಹಿತಿ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ವಿನಂತಿಸಿದರು.

ಈ‌ ಸಂದರ್ಭ ಜಿಲ್ಲಾ ಉಪಾಧ್ಯಕ್ಷರಾದ ನಯನ ಗಣೇಶ್, ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ, ಗೋಪಾಲಕೃಷ್ಣ, ಚಂದ್ರಶೇಖರ ಕೋಟ್ಯನ್ ಉಪಸ್ಥಿತರಿದ್ದರು. ಶಕ್ತಿಕೇಂದ್ರ ಪ್ರಮುಖರು, ಮಹಾಶಕ್ತಿಕೇಂದ್ರ ಪ್ರಮುಖರು, ಮಂಡಲ ಪದಾಧಿಕಾರಿಗಳು ವಿವಿಧ ವಿಷಯಗಳ ಸಂಚಾಲಕರು ಉಪಸ್ಥಿತರಿದ್ದರು.