ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ ಸಂತ ಮೇರಿ ಮಹಾವಿದ್ಯಾಲಯ - ಬೀಳ್ಕೊಡುಗೆ ಸಮಾರಂಭ

Posted On: 25-09-2021 10:37AM

ಶಿರ್ವ: ವಿದ್ಯಾರ್ಥಿಗಳ ಜೀವನದಲ್ಲಿ ಅಮೂಲ್ಯವಾದ ಶಿಕ್ಷಣವೆಂದರೆ ಅದು ಪದವಿ ಶಿಕ್ಷಣ ವಾಗಿರುತ್ತದೆ. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಕಾಲೇಜು ಶಿಕ್ಷಣದಲ್ಲಿ ಅನೇಕ ಅವಕಾಶಗಳಿವೆ. ಆಟ-ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕಾಗಿರುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುಹಿರಿಯರ ಮಾರ್ಗದರ್ಶನವನ್ನು ಪಡೆದು ಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಬೇಕು ಎಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರು ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ಅವರು ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಮುರಳಿ ರವರು ಸಂದರ್ಭೋಚಿತವಾಗಿ ಮಾತನಾಡಿದರು.

ಅಂತಿಮ ಪದವಿ ವಿದ್ಯಾರ್ಥಿಗಳಾದ ಲಿಖಿತ ಶೆಟ್ಟಿ, ಜೋಸಿಟಾ ಮೆಂಡೋನ್ಸಾ, ಕಾರ್ತಿಕ್ ರಾವ್, ಅಭಿಷೇಕ್, ಡಿಲ್ಸನ್ ನಿಜಾರ್,ತಮ್ಮ ಅನುಭವಗಳನ್ನು ಹಂಚಿಕೊಂಡರು.

ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕಚೇರಿ ಅಧೀಕ್ಷಕಿ ಡೊರಿನ್ ಡಿ'ಸಿಲ್ವ, , ವಿದ್ಯಾರ್ಥಿ ನಾಯಕರಾದ ದಾಕ್ಷಾಯಿಣಿ, ಮುಭಾಶಿ, ಎಲ್ಲ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಗೀತ ಪೂಜಾರಿ ಸ್ವಾಗತಿಸಿ, ಐಕ್ಯೂಎಸಿ ಸಂಯೋಜಕ ಮೆಲ್ವಿನ ಕ್ಯಾಸ್ಟಲಿನೋ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದಾ ವಂದಿಸಿದರು.