ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮೆಗಾ ಲೋಕ್ ಅದಾಲತ್ : ಒಂದೇ ದಿನದಲ್ಲಿ ಒಟ್ಟು 2020 ಪ್ರಕರಣ ಇತ್ಯರ್ಥ

Posted On: 02-10-2021 12:35PM

ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಸೆಪ್ಟಂಬರ್ 30 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಮೇಘಾ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 2020 ಪ್ರಕರಣಗಳನ್ನು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -13, ಚೆಕ್ಕು ಅಮಾನ್ಯ ಪ್ರಕರಣ-100, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-8, ಎಂ.ವಿ.ಸಿ ಪ್ರಕರಣ-72, ಎಂ.ಎAಆರ್.ಡಿ ಆಕ್ಟ್ ಪ್ರಕರಣ-7, ವೈವಾಹಿಕ ಪ್ರಕರಣ-9, ಸಿವಿಲ್ ಪ್ರಕರಣ-74, ಇತರೇ ಕ್ರಿಮಿನಲ್ ಪ್ರಕರಣ-1505 ಹಾಗೂ ವ್ಯಾಜ್ಯ ಪೂರ್ವ ದಾವೆ-232) ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.7,88,21,642/- ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್, ಕಕ್ಷಿಗಾರರು ಹಾಗೂ ಇತರ ಸರ್ಕಾರಿ ಇಲಾಖೆಯ ಸಂಪೂರ್ಣ ಸಹಕಾರದೊಂದಿಗೆ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಅವರ ಪ್ರಕಟಣೆ ತಿಳಿಸಿದೆ.